‘ಗ್ಯಾರಂಟಿ’ ಯೋಜನೆ ಜಾರಿ ವಿಳಂಬಕ್ಕೆ ಹೆಚ್ಡಿಕೆ ಗರಂ
ಸದನದಲ್ಲಿ ರಾಜಕೀಯವಾಗಿ ಬಳಸಿಕೊಳ್ಳಲು ದಳಪತಿ ಪ್ಲಾನ್
ಜುಲೈ 3 ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಚುನಾವಣೆ ಸಂದರ್ಭದಲ್ಲಿ ತಾವು ಘೋಷಿಸಿದ್ದ ‘ಗ್ಯಾರಂಟಿ ಯೋಜನೆ’ಗಳ ಜಾರಿಗೊಳಿಸುವ ವಿಚಾರದಲ್ಲಿ ಬ್ಯುಸಿಯಾಗಿದೆ. ಸರ್ಕಾರ ರಚನೆಯಾದ ಕ್ಷಣದಿಂದ ಯೋಜನೆಗಳನ್ನು ಜಾರಿ ಮಾಡ್ತೀವಿ ಅಂದಿದ್ದ ಕಾಂಗ್ರೆಸ್, ಇಕ್ಕಟ್ಟಿಗೆ ಸಿಲುಕಿದೆ.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬ ಆಗುತ್ತಿರೋದನ್ನು ರಾಜಕೀಯವಾಗಿ ಸರಿಯಾಗಿ ಬಳಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರ್ಸ್ವಾಮಿ ಸಿದ್ಧತೆ ನಡೆಸುತ್ತಿದ್ದಾರೆ. ಸದನದಲ್ಲಿ ರಾಜ್ಯ ಸರ್ಕಾರವನ್ನು ಕಟ್ಟಿಹಾಲು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಅದರ ಮುಂದುವರಿದ ಭಾಗವಾಗಿ ಎಕ್ಸ್ಪರ್ಟ್ಗಳಿಂದ ಸಾಧಕ-ಬಾಧಕಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಕೇವಲ ಸದನದ ಒಳಗಡೆ ಮಾತ್ರವಲ್ಲ, ಹೊರಗಡೆಯೂ ಹೋರಾಟಕ್ಕೆ ಸಜ್ಜಾಗಿದ್ದಾರೆ ಎನ್ನಲಾಗಿದೆ.
‘ಗ್ಯಾರಂಟಿ’ ಸಿಡಿಯಲಿದ್ದಾರೆ ಹೆಚ್ಡಿಕೆ
ಅಂದಹಾಗೆ ಜುಲೈ 3 ರಿಂದ ವಿಧಾನಸಭೆ ಅಧಿವೇಶನ ನಡೆಯಲಿದೆ. 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಜುಲೈ 7 ರಂದು ಸಿದ್ದರಾಮಯ್ಯ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಇನ್ನು ಜೂನ್ 26 ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ವಿಧಾನಸಭೆಯಲ್ಲಿ ತರಬೇತಿ ನಡೆಯಲಿದೆ. ನೂತನವಾಗಿ ಆಯ್ಕೆ ಆಗಿರುವ ಒಟ್ಟು 70 ಶಾಸಕರಿಗೆ ಆರೋಗ್ಯ ಸುಸ್ಥಿರತೆ, ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಭೇತಿ ನೀಡಲಾಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ