newsfirstkannada.com

ಮಹತ್ವದ ಬೆಳವಣಿಗೆ; ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ..!

Share :

Published September 18, 2023 at 11:27am

    ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸದಲ್ಲಿ ಭೇಟಿ

    ಇಬ್ಬರಿಂದಲೂ ಗೌರಿ-ಗಣೇಶ ಹಬ್ಬದ ಶುಭಾಶಯ ವಿನಿಮಯ

    ಕುಮಾರಸ್ವಾಮಿ ಭೇಟಿಯಾಗಿ ಜಾರಕಿಹೊಳಿ ಹೇಳಿದ್ದೇನು..?

ಬೆಂಗಳೂರು: ಮಹತ್ವದ ಬೆಳವಣಿಗೆ ಒಂದರಲ್ಲಿ ಇವತ್ತು ಮಾಜಿ ಮುಖ್ಯಮಂತ್ರಿ ಹೆಚ್.​ಡಿ.ಕುಮಾರಸ್ವಾಮಿಯನ್ನು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.

ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿರುವ ರಮೇಶ್ ಜಾರಕಿಹೊಳಿ, ಮಾಜಿ ಮುಖ್ಯಮಂತ್ರಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿಗೆ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಇದೇ ವೇಳೆ ಇಬ್ಬರು ನಾಯಕರು ಗೌರಿ-ಗಣೇಶ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.

ಭೇಟಿ ಬಳಿಕ ಮಾತನಾಡಿರುವ ರಮೇಶ್ ಜಾರಕಿಹೊಳಿ, ಕುಮಾರಸ್ವಾಮಿ ಆರೋಗ್ಯವನ್ನು ವಿಚಾರಿಸಲು ಬಂದಿದ್ದೆ. ಅವರು ಸದಾ ಗುಣಮುಖರಾಗಿರಲಿ ಎಂದು ಶುಭ ಹಾರೈಸುತ್ತೇನೆ. ಬಿಜೆಪಿ ಮತ್ತು ಜೆಡಿಎಸ್​ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಒಳ್ಳೆಯದು. ಹೈಕಮಾಂಡ್ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು. ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಈ ಮೈತ್ರಿ ಸರ್ಕಾರವನ್ನು ಕಡೆಗಲು ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರವಹಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಹತ್ವದ ಬೆಳವಣಿಗೆ; ಹೆಚ್​.ಡಿ.ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ..!

https://newsfirstlive.com/wp-content/uploads/2023/09/RAMESH_JARKIHOLI.jpg

Load More