ಒಂದು ವಾರ ವಿಪರೀತ ಚಳಿ.. ನಿಮ್ಮೂರಲ್ಲಿ ಎಷ್ಟಿದೆ? ರಾಜ್ಯ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

author-image
admin
Updated On
ಒಂದು ವಾರ ವಿಪರೀತ ಚಳಿ.. ನಿಮ್ಮೂರಲ್ಲಿ ಎಷ್ಟಿದೆ? ರಾಜ್ಯ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ
Advertisment
  • ರಾಜ್ಯದಲ್ಲಿ ಕೊರೆವ ಚಳಿ, ಮಂಜು ಮುಸುಕಿದ ವಾತಾವರಣ
  • ಎಲ್ಲೆಲ್ಲಿ ಎಷ್ಟು ಡಿಗ್ರಿ ಉಷ್ಣಾಂಶ ದಾಖಲಾಗಿದೆ ಅನ್ನೋ ಮಾಹಿತಿ
  • ವಿಜಯಪುರ ಹಾಗೂ ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೆವ ಚಳಿ, ಮಂಜು ಮುಸುಕಿದ ವಾತಾವರಣ ಮುಂದುವರಿದಿದೆ. ಬೆಳಗ್ಗೆ ಎದ್ದು ವಾಕಿಂಗ್ ಮಾಡೋರು ವಿಪರೀತ ಚಳಿ ಯಾವಾಗ ಕಡಿಮೆ ಆಗುತ್ತೆ ಅಂತ ಎದುರು ನೋಡುತ್ತಿದ್ದಾರೆ. ಚುಮು, ಚುಮು ಚಳಿಯಲ್ಲಿ ನಡುಗುತ್ತಿರೋ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆಯನ್ನ ನೀಡಿದೆ.

ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ವಿಪರೀತ ಚಳಿ ಇರಲಿದೆ. ಬೆಳಗಿನ ಜಾವ ಎಲ್ಲೆಡೆ ಮಂಜು ಮುಸುಕಿದ ವಾತಾವರಣ ಇದ್ದು ಎಲ್ಲೆಲ್ಲಿ ಎಷ್ಟು ಡಿಗ್ರಿ ಉಷ್ಣಾಂಶ ದಾಖಲಾಗಿದೆ ಅನ್ನೋ ಮಾಹಿತಿಯನ್ನು ಹಂಚಿಕೊಂಡಿದೆ.

publive-image

ಎಲ್ಲೆಲ್ಲಿ ಎಷ್ಟು ಉಷ್ಣಾಂಶ?
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ವಿಪರೀತ ಚಳಿ ಇದೆ.

ಇದನ್ನೂ ಓದಿ: ದಿನಕ್ಕೆ ಎರಡೇ ಎರಡು ಖರ್ಜೂರ.. ಚಳಿಗಾಲದಲ್ಲಿ ಈ ಹಣ್ಣು ತಿನ್ನೋದ್ರಿಂದ ಏನಾಗುತ್ತದೆ ಗೊತ್ತಾ..? 

HALನಲ್ಲಿ​ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದೇವನಹಳ್ಳಿ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 11.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಬಾಗಲಕೋಟೆಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 10.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ಕೊಪ್ಪಳದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment