ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್!
ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಸೈಬರ್ ಕ್ರೈಂ ಪೊಲೀಸರು
ಫೇಕ್ ಅಕೌಂಟ್ ಸೃಷ್ಟಿಸಿದ ಖತರ್ನಾಕ್ ಸೈಬರ್ ವಂಚಕನ ವಿರುದ್ಧ FIR
ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಸೈಬರ್ ವಂಚಕರ ಹಾವಳಿ ಜೋರಾಗಿದೆ. ವಂಚಕರು ರಾಜಕಾರಣಿ, ಸಿನಿಮಾ ತಾರೆಯರು, ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸುತ್ತಲೇ ಇರುತ್ತಾರೆ. ಅಂತಹ ಸೈಬರ್ ವಂಚಕರು ಇದೀಗ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೂ ಸೈಬರ್ ವಂಚಕರ ಹಾವಳಿ ಎದುರಾಗಿದೆ. ರಾಜ್ಯಪಾಲರ ಹೆಸರನ್ನು ಬಳಸಿ ವಂಚಕರು ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದಾರೆ. ರಾಜ್ಯಪಾಲರ ಪೋಟೋ ಕೂಡ ಬಳಕೆ ಮಾಡಿದ್ದಾರೆ.
ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ