newsfirstkannada.com

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; 2 ಕೋಟಿ ಸಾಮಗ್ರಿ ವಶ

Share :

Published January 13, 2024 at 6:16pm

    ಕರ್ನಾಟಕದ ಹೆಮ್ಮೆಯ ಬ್ರಾಂಡ್‌ ಆಗಿರೋ ಮೈಸೂರು ಸ್ಯಾಂಡಲ್‌ ಸೋಪ್​

    ಮೈಸೂರು ಸ್ಯಾಂಡಲ್‌ ಸಾಬೂನನ್ನು ನಕಲಿ ಮಾಡಿರೋ ತಯಾರಿ ಘಟಕ ಪತ್ತೆ

    ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರು ಪೊಲೀಸ್​ ವಶಕ್ಕೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಬ್ರಾಂಡ್‌ ಆಗಿರುವ ಮೈಸೂರು ಸ್ಯಾಂಡಲ್‌ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್​​ ಅನ್ನು ಪೊಲೀಸ್​ ಅರೆಸ್ಟ್​ ಮಾಡಿದ್ದಾರೆ. ಮೈಸೂರು ಸ್ಯಾಂಡಲ್‌ ಸಾಬೂನನ್ನು ನಕಲಿಯಾಗಿ ತಯಾರಿಸಿ ಬೇರೆ ಕಡೆ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್‌ಗಳು ಸೇರಿದಂತೆ ಸುಮಾರು 2 ಕೋಟಿ ರೂ. ಮೌಲ್ಯದ ಮಾಲು ಪತ್ತೆಯಾಗಿದೆ.

ಸದ್ಯ ಈ ಕೇಸ್​ ಸಂಬಂಧ ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆ ಆಗುತ್ತಿರೋ ಬಗ್ಗೆ ಕೆಎಸ್​ಡಿಎಲ್ ಅಧ್ಯಕ್ಷರಾದ ಸಚಿವ ಎಂ.ಬಿ ಪಾಟೀಲ್​ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಹೀಗಾಗಿ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಹಿಂದೆ ಹೋಗಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆ ಎಸ್ ಡಿ ಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರಣವಾಯಿತು.

ಇದನ್ನು ಓದಿ: ಬರೋಬ್ಬರಿ 18 ಫೋರ್​​.. 1 ಸಿಕ್ಸರ್​​.. ಇಂಗ್ಲೆಂಡ್​ ವಿರುದ್ಧ ಭರ್ಜರಿ ಶತಕ ಸಿಡಿಸಿದ RCB ಸ್ಟಾರ್​ ಬ್ಯಾಟರ್​​!

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ. ಇನ್ನು ಈ ಕಾರ್ಯಾಚರಣೆ ವೇಳೆ ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್​ಗಳು, ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್​ಗಳು, 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್​ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್​ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; 2 ಕೋಟಿ ಸಾಮಗ್ರಿ ವಶ

https://newsfirstlive.com/wp-content/uploads/2024/01/mysore-15.jpg

Load More