newsfirstkannada.com

ನಟ ಪ್ರಜ್ವಲ್ ದೇವರಾಜ್ ಅವರಿಗೆ ಇದ್ದಕ್ಕಿದ್ದಂತೆ ಏನಾಯ್ತು? ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

Share :

Published May 30, 2024 at 3:06pm

Update May 30, 2024 at 3:07pm

    ಪ್ರಜ್ವಲ್ ದೇವರಾಜ್ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ವೈರಲ್‌!

    ಪ್ರಜ್ವಲ್ ದೇವರಾಜ್‌ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ

    ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿದ್ದು ಯಾರು?

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಪ್ರಜ್ವಲ್ ದೇವರಾಜ್ ಅವರು ಕ್ಷೇಮವಾಗಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಇವತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ದೇವರಾಜ್ ಅವರ ಫೋಟೋ ಹಾಕಿ ಸುಳ್ಳು ಸುದ್ದಿಯನ್ನ ವೈರಲ್ ಮಾಡಿದ್ದಾರೆ. ಈ ಫೋಟೋ ವೈರಲ್‌ಗೆ ಪ್ರಜ್ವಲ್ ದೇವರಾಜ್ ಅವರ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ದೇವರಾಜ್ ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಯನ್ನ ಹಬ್ಬಿಸಲಾಗಿದೆ. ಈ ಫೋಟೋ ವೈರಲ್‌ಗೆ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿ ಸ್ಪಷ್ಟನೆಯನ್ನು ನೀಡಿದ್ದಾರೆ.

ನಟ ಪ್ರಜ್ವಲ್ ದೇವರಾಜ್ ಅವರು ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಜ್ವಲ್ ದೇವರಾಜ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸರಿಯಲ್ಲ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ, ರಾಧಿಕಾ ಮದ್ವೆ ಆಮಂತ್ರಣ ಪತ್ರಿಕೆ ರಿಲೀಸ್‌; ಅತಿಥಿಗಳಿಗೆ ಸ್ಪೆಷಲ್‌ ಡ್ರೆಸ್ ಕೋಡ್‌ ಕಡ್ಡಾಯ 

ಪ್ರಜ್ವಲ್ ದೇವರಾಜ್‌ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗಿತ್ತು. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಅವರು ಆಪ್ತ ಮೂಲಗಳಿಂದ ಮಾಹಿತಿ ಬಂದಿದೆ. ಇದನ್ನು ಗಮನಿಸಿರುವ ಕುಟುಂಬಸ್ಥರು ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ಪ್ರಜ್ವಲ್ ದೇವರಾಜ್ ಅವರಿಗೆ ಇದ್ದಕ್ಕಿದ್ದಂತೆ ಏನಾಯ್ತು? ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

https://newsfirstlive.com/wp-content/uploads/2024/05/Prajwal-Devaraj.jpg

Load More