newsfirstkannada.com

VIDEO: ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ? ಮೊದಲ ಬಾರಿ ಭೇಟಿಗೆ ಆಗಮಿಸಿದ ಕುಟುಂಬ ಸದಸ್ಯರು

Share :

Published June 24, 2024 at 1:10pm

  ದರ್ಶನ್ ಭೇಟಿಯಾಗಲು ಕುಟುಂಬ ಸದಸ್ಯರಿಗೆ ಮಾತ್ರ ಅವಕಾಶ

  ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದ ಪತ್ನಿ

  ಜೈಲು ಪಾಲಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮಿ ಆಗಮನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅತ್ಯಂತ ಕ್ರೂರ ಕೊಲೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿಸಿದ ಪೊಲೀಸರು ದರ್ಶನ್ ಗ್ಯಾಂಗ್‌ ಪರಪ್ಪನ ಅಗ್ರಹಾರ ಪಾಲಾಗುವಂತೆ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ ನಂ.3ರಲ್ಲಿ ನಟ ದರ್ಶನ್ ಕಾಲ ಕಳೆಯುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ದರ್ಶನ್ ಬಂಧನವಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ಕೊಟ್ಟು ಪೊಲೀಸರ ವಿಚಾರಣೆ ಎದುರಿಸಿದ್ದರು. ಇದಾದ ಬಳಿಕ ವಿಜಯಲಕ್ಷ್ಮಿ ಅವರು ದರ್ಶನ್ ಅವರ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಜೈಲಲ್ಲಿ 2ನೇ ರಾತ್ರಿ ಕಳೆದ ದರ್ಶನ್​.. ಸರಿಯಾಗಿ ಊಟ, ನಿದ್ದೆ ಇಲ್ಲದ ‘ಕಾಟೇರ’ನ ಕತೆ-ವ್ಯಥೆ ಹೀಗಿದೆ 

ಜೈಲು ಪಾಲಾದ ಬಳಿಕ ಇದೇ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರನ್ನು ಭೇಟಿಗೆ ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದ ಬ್ಯಾರಿಕೇಡ್‌ವರೆಗೂ ಆಗಮಿಸಿದ್ದ ವಿಜಯಲಕ್ಷ್ಮಿ ಅವರ ಕಾರು ದಿಢೀರನೇ ವಾಪಸ್ ತೆರಳಿತ್ತು.

ಪರಪ್ಪನ ಅಗ್ರಹಾರದ ಬಳಿ ವಿಜಯಲಕ್ಷ್ಮಿ ಅವರಿಗೆ ಸೇರಿದ KA-05, NB-6633 ನಂಬರಿನ ಕಾರು ಆಗಮಿಸಿತ್ತು. ಪೊಲೀಸರ ಬ್ಯಾರಿಕೇಡ್ ಬಳಿ ಬರುತ್ತಿದ್ದಂತೆ ಮಾಧ್ಯಮದವರನ್ನು ನೋಡಿರುವ ವಿಜಯಲಕ್ಷ್ಮಿ ಅವರ ಕಾರು ವಾಪಸ್ ಹೋಗಿತ್ತು. ಆಮೇಲೆ ಕಾರು ಬದಲಿಸಿಕೊಂಡು ದರ್ಶನ್ ಅವರ ಪತ್ನಿಯನ್ನು ಪೊಲೀಸರು ಜೈಲಿನ ಒಳಗೆ ಕರೆದುಕೊಂಡು ಹೋಗಿದ್ದಾರೆ. ಕಿಯಾ ಕಾರನ್ನು ಬದಲಿಸಿಕೊಂಡು ಬೊಲೆನೋ ಕಾರಿನಲ್ಲಿ ಮಾಧ್ಯಮಗಳ ಕಣ್ತಪ್ಪಿಸಿ ಪೊಲೀಸರು ಜೈಲಿನ ಒಳಗೆ ಕರೆದುಕೊಂಡು ಹೋಗಿದ್ದಾರೆ.

ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬ ಸದಸ್ಯರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜೈಲಿಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಆಗಮಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ? ಮೊದಲ ಬಾರಿ ಭೇಟಿಗೆ ಆಗಮಿಸಿದ ಕುಟುಂಬ ಸದಸ್ಯರು

https://newsfirstlive.com/wp-content/uploads/2024/06/Darshan-Vijayalakshmi.jpg

Load More