newsfirstkannada.com

VIDEO: ‘ಮೋದಿಯನ್ನ ತಿಹಾರ್ ಜೈಲಿಗೆ ಹಾಕಿ’- ನಾಲಿಗೆ ಹರಿಬಿಟ್ಟ ಖ್ಯಾತ ನಟ

Share :

Published April 25, 2024 at 6:10pm

    ಪ್ರಧಾನಿ ನರೇಂದ್ರ ಮೋದಿ ಅವರು ವಿಷಸರ್ಪ ಇದ್ದ ಹಾಗೆ - ಮನ್ಸೂರ್‌

    ಮೋದಿ ನೇತೃತ್ವದಲ್ಲಿ ಈ ಚುನಾವಣೆ ನ್ಯಾಯಯುತವಾಗಿ ನಡೆಯುವುದಿಲ್ಲ

    ಮನಮೋಹನ್ ಸಿಂಗ್ ಅವರ ಕಾಲಿನ ಧೂಳಿಗೂ ಅವ್ರು ಸಮಾನರಲ್ಲ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮನ್ಸೂರ್ ಅಲಿ ಖಾನ್ ಅವರು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಟ್ಟಿದ್ದಾರೆ.

ಚೆನ್ನೈನ ಕಾಂಗ್ರೆಸ್‌ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ.

ಮನ್ಸೂರ್ ಅಲಿ ಖಾನ್ ಅವರು ಇತ್ತೀಚೆಗೆ ಡೆಮಾಕ್ರಟಿಕ್ ಟೈಗರ್ಸ್ ಆಫ್ ಇಂಡಿಯಾ ಎಂಬ ಹೊಸ ಪಕ್ಷವನ್ನು ಆರಂಭಿಸಿದ್ದರು. ಲೋಕಸಭೆ ಚುನಾವಣೆಗೂ ಮುನ್ನ ಎಐಎಡಿಎಂಕೆ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವೆಲ್ಲೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಬೆಡ್​ರೂಮ್​ ಸೀನ್ ಮಾಡಬೇಕಿತ್ತು.. ಮನ್ಸೂರ್‌ ಅಲಿ ಖಾನ್ ಮಾತಿಗೆ ಬಹುಭಾಷಾ ನಟಿ ತ್ರಿಷಾ ಹೇಳಿದ್ದೇನು?

ತಮಿಳುನಾಡಿನಲ್ಲಿ ಏಪ್ರಿಲ್ 19ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆದಿದೆ. ಮತದಾನ ಮುಗಿದ ಬಳಿಕ ಮನ್ಸೂರ್ ಅಲಿ ಖಾನ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮನ್ಸೂರ್ ಅಲಿಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರುವ ಪತ್ರ ಸಲ್ಲಿಸಿದ್ದಾರೆ. ಚುನಾವಣೆಯ ನಂತರ ಪಕ್ಷ ಸೇರುವ ಪತ್ರವನ್ನು ಸ್ವೀಕರಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿರುವ ಮನ್ಸೂರ್ ಅಲಿಖಾನ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಷಸರ್ಪ ಇದ್ದ ಹಾಗೆ. ಅವರನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು. ಅವರ ನೇತೃತ್ವದಲ್ಲಿ ಈ ಚುನಾವಣೆ ನ್ಯಾಯಯುತವಾಗಿ ನಡೆಯುವುದಿಲ್ಲ. ಪ್ರಧಾನಿ ಮೋದಿ ಅವರು ಮನಮೋಹನ್ ಸಿಂಗ್ ಅವರ ಕಾಲಿನ ಧೂಳಿಗೆ ಸಮಾನರಲ್ಲ ಎಂದಿದ್ದಾರೆ. ಮೊದಲು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ. ಮತ್ತೆ ಮಾತೃ ಪಕ್ಷ ಸೇರಲಿದ್ದೇನೆ. ಇಂಡಿಯನ್ ಡೆಮಾಕ್ರಟಿಕ್ ಟೈಗರ್ಸ್ ಪಾರ್ಟಿಯನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸಲಾಗುವುದು. ಮತ್ತು ಅದರ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮನ್ಸೂರ್ ಅಲಿ ಖಾನ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ‘ಮೋದಿಯನ್ನ ತಿಹಾರ್ ಜೈಲಿಗೆ ಹಾಕಿ’- ನಾಲಿಗೆ ಹರಿಬಿಟ್ಟ ಖ್ಯಾತ ನಟ

https://newsfirstlive.com/wp-content/uploads/2024/04/Mansoor-Ali-Khan-2.jpg

Load More