/newsfirstlive-kannada/media/post_attachments/wp-content/uploads/2024/07/Kohli_Rohit-RCB.jpg)
ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ವಿಶ್ವಕಪ್ ಗೆದ್ದ ಕೂಡಲೇ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇನ್ನು, ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಆಗಿದ್ದಾರೆ ಅನ್ನೋ ಬೇಸರದಲ್ಲಿರೋ ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೊಹ್ಲಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ. ಸದ್ಯ ಕೊಹ್ಲಿ ಅಂತರಾಷ್ಟ್ರೀಯ ಮಹತ್ವದ ಜವಾಬ್ದಾರಿಗಳಿಂದ ಮುಕ್ತರಾಗಿದ್ದು, ಐಪಿಎಲ್ನಲ್ಲಿ ಮತ್ತೆ ಆರ್ಸಿಬಿ ತಂಡವನ್ನು ಮುನ್ನಡೆಸಲು ಕೊಹ್ಲಿಗೆ ಮನವರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
Manifesting Rohit Sharma joining RCB next year as captain and leading them to their first IPL title.#RCB#RohitSharma?#ViratKohli?#IPL2025pic.twitter.com/oSSyqn4jE8
— Shubham Borade-Patil (@Shubh1mm)
Manifesting Rohit Sharma joining RCB next year as captain and leading them to their first IPL title.#RCB#RohitSharma𓃵#ViratKohli𓃵#IPL2025pic.twitter.com/oSSyqn4jE8
— Shubham Borade-Patil (@Shubh1mm) July 2, 2024
">July 2, 2024
ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಈಗ 40 ವರ್ಷ. ಹಾಗಾಗಿ ಐಪಿಎಲ್ನಿಂದ ಫಾಫ್ ನಿವೃತ್ತಿ ಆಗೋ ಸಾಧ್ಯತೆ ಇದೆ. ಇದಾದ ಬಳಿಕ ಆರ್ಸಿಬಿ ತಂಡಕ್ಕೆ ಹೊಸ ಕ್ಯಾಪ್ಟನ್ ಬೇಕಿದ್ದಾರೆ. ಆದ್ದರಿಂದ ಮುಂದಿನ ಸೀಸನ್ಗೆ ಕೊಹ್ಲಿ ಅವರಿಗೆ ಆರ್ಸಿಬಿ ಪಟ್ಟ ನೀಡಲು ಫ್ರಾಂಚೈಸಿ ನಿರ್ಧಾರ ಮಾಡಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ.
ರೋಹಿತ್ ಶರ್ಮಾ ಕ್ಯಾಪ್ಟನ್ಸಿಗೆ ಆರ್ಸಿಬಿ ಫ್ಯಾನ್ಸ್ ಒತ್ತಾಯ
ಇನ್ನೊಂದೆಡೆ ವಿರಾಟ್ ಕೊಹ್ಲಿಗೆ ಕ್ಯಾಪ್ಟನ್ಸಿ ಒತ್ತಡ ಬೇಡ. ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಐಪಿಎಲ್ ಆಡೋದಾಗಿ ಹೇಳಿದ್ದಾರೆ. ಮುಂದಿನ ಸೀಸನ್ ವೇಳೆಗೆ ರೋಹಿತ್ ಮುಂಬೈ ಇಂಡಿಯನ್ಸ್ ತೊರೆಯೋದು ಗ್ಯಾರಂಟಿ. ಆಕ್ಷನ್ನಲ್ಲಿ ಆರ್ಸಿಬಿ ರೋಹಿತ್ ಶರ್ಮಾ ಅವರನ್ನು ಖರೀದಿ ಮಾಡಲಿ. ರೋಹಿತ್ ಕ್ಯಾಪ್ಟನ್ ಆಗಲಿ, ಕೊಹ್ಲಿ ಆರ್ಸಿಬಿ ಪರ ಚೆನ್ನಾಗಿ ಆಡಿ ಕಪ್ ಗೆಲ್ಲಿಸಲಿ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ವಿಶ್ವಕಪ್ ಗೆದ್ದ ಬೆನ್ನಲ್ಲೇ ಮಹತ್ವದ ನಿರ್ಧಾರ.. ವಿರಾಟ್ ಕೊಹ್ಲಿ ಮತ್ತೆ ಆರ್ಸಿಬಿ ಕ್ಯಾಪ್ಟನ್!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ