newsfirstkannada.com

BREAKING: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ನಿಧನ

Share :

Published May 22, 2024 at 7:44pm

  ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪರ ಹೋರಾಟ ಮಾಡಿದ್ದ ಜಯಶ್ರೀ

  ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಗುರನ್ನವರ್!

  ಮಹಿಳೆಯರನ್ನ ರೈತ ಸಂಘಟನೆಯಲ್ಲಿ ತೊಡಗಿಸುತ್ತಿದ್ದ ಹೋರಾಟಗಾರ್ತಿ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜಯಶ್ರೀ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ ಮೃತಪಟ್ಟಿದ್ದಾರೆ. ಜಯಶ್ರೀ ಅವರು ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪರ ಹೋರಾಟ ಮಾಡಿದ್ದರು. ಹೆಚ್​.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟ ಕಟ್ಟಿದ್ದರು.

ಇದನ್ನೂ ಓದಿ: ಹಾಸನ ಅಷ್ಟೇ ಅಲ್ಲ.. ಎಲ್ಲೆಲ್ಲಿ ಪೆನ್​ಡ್ರೈವ್ ಹಂಚಿದ್ದಾರೆ ಗೊತ್ತಾ? ಪ್ರೂಫ್​ ಸಮೇತ HDK ಶಾಕಿಂಗ್ ಹೇಳಿಕೆ

ಕಬ್ಬಿನ ಬಾಕಿ ಬಿಲ್​​ ಪಾವತಿಗಾಗಿ ಒತ್ತಾಯಿಸಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ಹೋರಾಟ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು. ಬಳಿಕ ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನ ರೈತ ಸಂಘಟನೆಯಲ್ಲಿ ತೊಡಗಿಸಿದ್ದರು ಜಯಶ್ರೀ. ಇನ್ನು ಮೃತ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅವರು ಓರ್ವ ಮಗನನ್ನು ಅಗಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ನಿಧನ

https://newsfirstlive.com/wp-content/uploads/2024/05/jayashree.jpg

Load More