ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯದಿಂದ ಮಹತ್ವದ ಆದೇಶ
ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಶವವಾಗಿ ಪತ್ತೆ
ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪದಲ್ಲಿ ಶಿಕ್ಷೆ
ಉಡುಪಿ: 15 ವರ್ಷಗಳ ಹಿಂದೆ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಕೇಸ್ಗೆ ಸಂಬಂಧಪಟ್ಟಂತೆ ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
2008 ಜೂನ್ 10 ರಂದು ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಪತ್ತೆಯಾಗಿದ್ದರು. ಇದೇ ವಿಚಾರವಾಗಿ ಆರೋಪಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ್ದ. ಹೀಗಾಗಿ ಈ ಕೇಸ್ ಸಂಬಂಧ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.
ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ದೆಹಲಿಗೆ ಕರೆದೊಯ್ದಿದ್ದ ಅತುಲ್ ಅವರು ಪದ್ಮಪ್ರಿಯ ದೆಹಲಿಗೆ ತೆರಳಲು ನಕಲಿ ದಾಖಲೆ ಸೃಷ್ಟಿಸಿದ್ದ ಎನ್ನಲಾಗಿದೆ. ಪ್ರಕರಣದಲ್ಲಿ ಮಣಿಪಾಲ ಠಾಣಾ ಪೊಲೀಸ್ ಹಾಗೂ ಸಿಓಡಿ ತನಿಖೆ ನಡೆಸಿದ್ದರು. 2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ