/newsfirstlive-kannada/media/post_attachments/wp-content/uploads/2025/05/chaithra-kundapura9.jpg)
ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಖುದ್ದು ತಂದೆಯೇ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಬೆನ್ನಲ್ಲೇ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು.. ಮದುವೆ ಬೆನ್ನಲ್ಲೇ ತಂದೆಯಿಂದ ಸ್ಫೋಟಕ ಹೇಳಿಕೆ
ಈ ಬಗ್ಗೆ ಮಾತಾಡಿದ ಅವರು, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.
ಚೈತ್ರಾ ಬಿಗ್ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್ಬಾಸ್ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.
ಇದನ್ನೂ ಓದಿ: ಇದು ಸಿನಿಮಾ ಅಲ್ಲ, ಸತ್ಯ.. ವಿಶ್ವದ ದೈತ್ಯ ಯಕುಮಾಮಾ ಅನಕೊಂಡ
ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದಾರೆ ಹೆಮ್ಮೆಯ ವಿಷಯ. ಆದ್ರೆ ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ. ನನಗೆ ಸರಿಯಾಗಿ ಆಮಂತ್ರಣ ಕೂಡ ನೀಡಿಲ್ಲ. ಚೈತ್ರಾ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ.
ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದರು. ನಾನು ಸತ್ಯ, ನ್ಯಾಯ ,ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಶಾಲೆ ಕೆಲಸ ಮಾಡಿಕೊಂಡು ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲು ಚೈತ್ರ ಸುಳ್ಳು ಅಪವಾದ ಹಾಕಿದ್ದಳು. ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ಆದ್ರೆ ಅವಳು ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲಿ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ. ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ. ಗಂಡನ ಗೌರವ ನನ್ನ ಹೆಂಡತಿಗೂ ಬೇಡ. ಮಗಳಿಗೆ ಸಪೋರ್ಟ್ ಮಾಡುತ್ತಿದ್ದಾಳೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ