/newsfirstlive-kannada/media/post_attachments/wp-content/uploads/2024/12/fengal_Cyclone_3.jpg)
ಮಂಡ್ಯ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಕೋಲಾರದಲ್ಲೂ ಸೈಕ್ಲೋನ್​ನಿಂದ ಅವಾಂತರ ಸೃಷ್ಟಿಯಾಗಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯುವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಹಿನ್ನೆಲೆ ರಜೆ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ನಿಲ್ಲದ ಫೆಂಗಲ್ ಚಂಡ ಮಾರುತದ ಅಬ್ಬರ
ದಕ್ಷಿಣ ಒಳನಾಡಿನಲ್ಲಿ ಕಳೆದೆರಡು ದಿನಗಳಿಂದ ಫೆಂಗಲ್ ಚಂಡಮಾರುತ ಆರ್ಭಟ ಜೋರಾಗಿದೆ. ಈ ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತ ವಾಗಿದೆ. ಮಳೆ ಗಾಳಿ ಹಾಗೂ ಚಳಿ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2024/12/fengal_Cyclone.jpg)
ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣಕನ್ನಡ, ಉಡುಪಿ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದೆ. ಇದು ಇಂದು ಸಹ ಮುಂದುವರಿಯಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಉಡುಪಿಯಲ್ಲೂ ರಾತ್ರಿಯಿಂದ ಮಳೆಯಾಗಿದ್ದು, ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಕೋಲಾರ ಜಿಲ್ಲೆಯಲ್ಲಿ ಸಹ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ: Group- A ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.. ಈ ಸ್ಪೆಷಲ್ ಕೋರ್ಸ್ ಮಾಡಿದವರಿಗೆ ಚಾನ್ಸ್
/newsfirstlive-kannada/media/post_attachments/wp-content/uploads/2024/12/fengal_Cyclone_1.jpg)
ಮಂಡ್ಯ, ಮೈಸೂರು, ರಾಮನಗರದಲ್ಲೂ ರಜೆ ಘೋಷಣೆ
ಫೆಂಗಲ್ ಚಂಡಮಾರುತದಿಂದ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಮನಗರ ಜಿಲ್ಲೆಯಲ್ಲೂ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲೂ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಅನೌನ್ಸ್ ಮಾಡಲಾಗಿದೆ.
ಇನ್ನು ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕಾಲೇಜು ಹೊರತುಪಡಿಸಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಹಾಗೇ ಉಡುಪಿ ಜಿಲ್ಲೆಯಲ್ಲೂ ಸಹ ನಾಳೆ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಫೆಂಗಲ್​ ಎಫೆಕ್ಟ್​ನಿಂದ ರಾಜ್ಯದಲ್ಲಿ ಮಳೆ ಗಾಳಿ ಜೋರಾಗಿದ್ದು, ಜನರು ಹೈರಾಣಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us