/newsfirstlive-kannada/media/post_attachments/wp-content/uploads/2024/08/KL-Rahul_Gambhir_Rohit.jpg)
ಕೊಲಂಬೋದಾ ಆರ್. ಪ್ರೇಮದಾಸ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ, ಶ್ರೀಲಂಕಾ ಮುಖಾಮುಖಿ ಆಗಿವೆ. ಟಾಸ್ ಗೆದ್ದ ಶ್ರೀಲಂಕಾ ಕ್ಯಾಪ್ಟನ್ ಚರಿತ್ ಅಸಲಂಕ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಬೌಲಿಂಗ್ ಮಾಡುತ್ತಿದೆ.
ಇದಕ್ಕೂ ಮುನ್ನ ನಡೆದ 3 ಪಂದ್ಯಗಳ ಟಿ20 ಸರಣಿಯನ್ನು ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಕ್ಲೀನ್ ಸ್ವೀಪ್ ಮಾಡಿತ್ತು. ಈಗ ಏಕದಿನ ತಂಡವನ್ನು ಅನುಭವಿ ಕ್ರಿಕೆಟರ್ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದಾರೆ.
2023ರ ಏಕದಿನ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿ 50 ಓವರ್ಗಳ ಫಾರ್ಮೇಟ್ಗೆ ಕಮ್ಬ್ಯಾಕ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪಂತ್ ಅವರನ್ನು ಬೆಂಚ್ ಕಾಯಿಸಿದ್ದು, ಸ್ಟಾರ್ ವಿಕೆಟ್ ಕೀಪರ್ ಕೆ.ಎಲ್ ರಾಹುಲ್ ಕೂಡ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
As per reports Rohit Sharma wanted to play his son Rishabh Pant instead of Kl Rahul. But Gautam Gambhir took stand for Kl Rahul. An heated argument occured between Rohit & Gambhir. But at last Gambhir owned Rohit.
Via- Devendra pandiya (Passenger sports) pic.twitter.com/8OJJGChVH9
— Lordgod ?™ (@LordGod188) August 2, 2024
ಕೆ.ಎಲ್ ರಾಹುಲ್ಗಾಗಿ ಗಂಭೀರ್, ರೋಹಿತ್ ಮಧ್ಯೆ ಗಲಾಟೆ..!
ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ವಿಚಾರವಾಗಿ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಮಧ್ಯೆ ಗಲಾಟೆ ನಡೆದಿದೆ. ರೋಹಿತ್ ಶರ್ಮಾ ರಿಷಬ್ ಪಂತ್ ಅವರನ್ನು ಕಣಕ್ಕಿಳಿಸಬೇಕು ಎಂದು ಪಟ್ಟು ಹಿಡಿದಿದ್ದರು. ಕೋಚ್ ಗಂಭೀರ್ ಕೆ.ಎಲ್ ರಾಹುಲ್ ಬ್ಯಾಟಿಂಗ್ ಮಾಡಿ ಪ್ಲೇಯಿಂಗ್ ಎಲೆವೆನ್ನಲ್ಲಿ ಚಾನ್ಸ್ ಕೊಡಿಸಿದ್ರು ಅನ್ನೋ ವಿಚಾರ ತಿಳಿದು ಬಂದಿದೆ.
ಇದನ್ನೂ ಓದಿ: ಭಾರತ ತಂಡಕ್ಕೆ ಕೆ.ಎಲ್ ರಾಹುಲ್ ಸ್ಟ್ರಾಂಗ್ ಕಮ್ಬ್ಯಾಕ್.. ಲಂಕಾ ವಿರುದ್ಧ ಸ್ಟಾರ್ ಆಟಗಾರರಿಗೆ ಕೊಕ್!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ