newsfirstkannada.com

ಕೋಲಾರ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಫೈನಲ್‌; ಟಿಕೆಟ್ ಯಾರಿಗೆ?

Share :

Published March 22, 2024 at 6:09pm

    ಚಾಮರಾಜನಗರದಲ್ಲಿ ಸಚಿವ ಮಹಾದೇವಪ್ಪ ಅವರ ಮಗನಿಗೆ ಟಿಕೆಟ್?

    ಕೋಲಾರ ಟಿಕೆಟ್‌ಗೆ ಮುನಿಯಪ್ಪ, ರಮೇಶ್‌ ಕುಮಾರ್‌ ಬಣ ಬಡಿದಾಟ

    ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಹಾಗೂ ಬಳ್ಳಾರಿಗೆ ತುಕಾರಾಂಗೆ ಚಾನ್ಸ್‌?

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಹುತೇಕ ಅಂತಿಮವಾಗುತ್ತಿದೆ. ಕಾಂಗ್ರೆಸ್, ಬಿಜೆಪಿ ಈಗಾಗಲೇ ರಾಜ್ಯದ ಪ್ರಮುಖ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು, ಎರಡೂ ಪಕ್ಷದ ನಾಯಕರು ಮತಬೇಟೆಗೆ ಇಳಿದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ 2 ಹಂತದಲ್ಲಿ ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 24 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದ್ದು, ಇನ್ನು 4 ಕ್ಷೇತ್ರಗಳ ಆಯ್ಕೆ ಮಾತ್ರ ಬಾಕಿ ಉಳಿದಿದೆ.

ಇಂದು ಕಾಂಗ್ರೆಸ್ ನಾಯಕರು 28 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸುವ ಸಾಧ್ಯತೆ ಇದೆ. ಚಾಮರಾಜನಗರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರದ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಮಾತ್ರ ಬಾಕಿ ಉಳಿದಿದೆ. ಚಾಮರಾಜನಗರದಲ್ಲಿ ಸಚಿವ ಮಹಾದೇವಪ್ಪ ಅವರ ಪುತ್ರನನ್ನೇ ಕಣಕ್ಕಿಳಿಸಲು ಬೇಡಿಕೆ ಇದೆ. ಕೋಲಾರದಲ್ಲಿ ಬಣ ಬಡಿದಾಟದಿಂದ ಕಗ್ಗಂಟು ಏರ್ಪಟ್ಟಿದೆ.

ಕೋಲಾರ ಟಿಕೆಟ್ ವಿಚಾರಕ್ಕೆ ಸಚಿವ ಕೆ.ಹೆಚ್‌. ಮುನಿಯಪ್ಪನವರು ಡಿಸಿಎಂ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದಾರೆ. ನನ್ನ ಅಳಿಯನಿಗೆ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದೇನೆ. ಮಾಜಿ ಸಚಿವ ರಮೇಶ್ ಕುಮಾರ್ ಸೇರಿದಂತೆ ಯಾರ ವಿರುದ್ಧವೂ ನಾನು ಮಾತಾಡಿಲ್ಲ. ಭಿನ್ನಾಭಿಪ್ರಾಯ ಸರಿ ಮಾಡ್ಕೊಂಡು ಹೋಗ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ‘ಕೈ’ಗೆ ಬಂಡಾಯ.. ಬೆಂಬಲಿಗರ ಮುಂದೆ ಬಿಕ್ಕಿ, ಬಿಕ್ಕಿ ಅತ್ತ ವೀಣಾ ಕಾಶಪ್ಪನವರ್; ಹೇಳಿದ್ದೇನು?

ಚಾಮರಾಜನಗರಕ್ಕೆ ಸಚಿವ ಮಹಾದೇವಪ್ಪ ಪುತ್ರ ಸುನಿಲ್ ಬೋಸ್, ಕೋಲಾರಕ್ಕೆ ಎಲ್. ಹನುಮಂತಯ್ಯ, ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಹಾಗೂ ಬಳ್ಳಾರಿಗೆ ತುಕಾರಾಂ ಹೆಸರು ಅಂತಿಮವಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೋಲಾರ, ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಫೈನಲ್‌; ಟಿಕೆಟ್ ಯಾರಿಗೆ?

https://newsfirstlive.com/wp-content/uploads/2024/03/DKS-1.jpg

Load More