newsfirstkannada.com

ಮೊಹಮ್ಮದ್ ನಲಪಾಡ್ ವಿರುದ್ಧ ಬೆಂಗಳೂರಲ್ಲಿ ಕೇಸ್ ದಾಖಲು -Photos

Share :

Published January 24, 2024 at 10:47am

Update January 24, 2024 at 10:48am

    ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ A-1

    ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್

    ಇನ್ಸ್​ಪೆಕ್ಟರ್ ಭರತ್​ರಿಂದ ಸ್ವಯಂ ಪ್ರೇರಿತ ಕೇಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹ್ಮದ್ ಹ್ಯಾರಿಸ್ ನಲಪಾಡ್  ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಅಡ್ಡಿ ಪಡಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಬಳಿ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ರಸ್ತೆ ತಡೆ ಮಾಡಿ ಪಂಜಿನ ಮೆರವಣಿ ನಡೆಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಲಪಾಡ್ ಸೇರಿದಂತೆ 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪ, ಮೈಕ್ ಮೂಲಕ ಅನ್ಸೌಮೆಂಟ್, ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ದೂರು ದಾಖಲಾಗಿದೆ. ಹೈಗ್ರೌಂಡ್ ಠಾಣೆಯ ಇನ್ಸ್​ಪೆಕ್ಟರ್ ಭರತ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಎಫ್ಐಆರ್​ನಲ್ಲಿ ನಲಪಾಡ್ ಮೊದಲನೇ ಆರೋಪಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೊಹಮ್ಮದ್ ನಲಪಾಡ್ ವಿರುದ್ಧ ಬೆಂಗಳೂರಲ್ಲಿ ಕೇಸ್ ದಾಖಲು -Photos

https://newsfirstlive.com/wp-content/uploads/2024/01/NALPAD-4.jpg

Load More