ರಿಯಲ್ ಸ್ಟಾರ್ ಉಪೇಂದ್ರ ಮೇಲೆ ದಾಖಲಾಯ್ತು ಎಫ್ಐಆರ್
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು
ಆಕ್ಷೇಪಾರ್ಹ ಹೇಳಿಕೆ ಬೆನ್ನಲ್ಲೇ ಕ್ಷಮೆಯಾಚಿಸಿದ ನಟ ಉಪೇಂದ್ರ
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉಪ್ಪಿ ಮೇಲೆ ಕೇಸ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಮದೂಸೂಧನ್ ಕೆ ಎಸ್ ಎಂಬುವವರು ದೂರು ದಾಖಲಿಸಿದ್ದಾರೆ.
ನಟ ಉಪೇಂದ್ರ ಅವರು ಆನ್ಲೈನ್ ಕಾರ್ಯಕ್ರಮವೊಂದರಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ನಟ ಉಪೇಂದ್ರ ಅವರ ವಿರುದ್ಧ ಸಿಕೆ (ಚೆನ್ನಮ್ಮನ ಕೆರೆ) ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ:: ಉಪೇಂದ್ರ (ಪ್ರಜಾಕೀಯ)
ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು "ಹೊಲ್ಗೇರಿ"ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ..??#prajakeeya pic.twitter.com/jarIHwCHDN
— DEEPU GOWDRU (@DEEPUVAJRAMUNI) August 12, 2023
ಕ್ಷಮಾಪಣೆ ಕೋರಿದ ಉಪ್ಪಿ
ಇನ್ನು ಈ ಕುರಿತು ನಟ ಉಪೇಂದ್ರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದಾರೆ. ಇಂದು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು, ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ. ಮತ್ತು ಈ ಮಾತಿಗೆ ಕ್ಷಮೆಯಿರಲಿ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ