/newsfirstlive-kannada/media/post_attachments/wp-content/uploads/2024/07/Acp-chandan-Pratap-Simha-1.jpg)
ಬೆಂಗಳೂರು: ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಬಂಧನಕ್ಕೆ ಕಾರಣವಾದ ACP ಚಂದನ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಮಧ್ಯೆ ಜಟಾಪಟಿ ಜೋರಾಗಿದೆ. ACP ಚಂದನ್ ವಿರುದ್ಧ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ ಆರೋಪ ಮಾಡಿರುವ ಪುನೀತ್ ಕೆರೆಹಳ್ಳಿ ಹಾಗೂ ಪ್ರತಾಪ್ ಸಿಂಹ ಇಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು.
ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸಲಿಂಗಕಾಮಿ ಇದ್ದಾರಾ? ACP ಚಂದನ್ ವಿರುದ್ಧ ಪ್ರತಾಪ್ ಸಿಂಹ ವೀರಾವೇಶ
ACP ಚಂದನ್ ವಿರುದ್ಧ ಆರೋಪ ಮಾಡಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು, ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದರು. ACP ವಿರುದ್ಧ ಕಮಿಷನರ್‌ಗೂ ದೂರು ನೀಡಿದ್ದ ಪ್ರತಿಭಟನಾಕಾರರು ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದರು.
ಕಮಿಷನರ್‌ಗೆ ದೂರು ನೀಡಿದ ಬಳಿಕ ACP ಚಂದನ್ ವರ್ಸಸ್ ಪ್ರತಾಪ್ ಸಿಂಹ ನಡುವಿನ ಈ ಸಂಘರ್ಷಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗು ಪುನೀತ್ ಕೆರೆಹಳ್ಳಿ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ FIR ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ; ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ; ಮುಂದೇನಾಯ್ತು?
ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. A1- ಪುನೀತ್ ಕೆರೆಹಳ್ಳಿ, A2- ಪ್ರತಾಪ್ ಸಿಂಹ ಸೇರಿದಂತೆ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ