newsfirstkannada.com

ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಿದ ಅಸ್ಸಾಂ ಸರ್ಕಾರ; ಅರೆಸ್ಟ್ ಆಗ್ತಾರಾ?

Share :

Published January 24, 2024 at 7:48am

  ಅಸ್ಸಾಂನಲ್ಲಿ ರಾಹುಲ್ ಭಾರತ್​ ಜೋಡೋ ನ್ಯಾಯಯಾತ್ರೆ

  ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ

  ಬಿಜೆಪಿ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಎಂದ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಪ್ರಸ್ತುತ ಅಸ್ಸಾಂನಲ್ಲಿ ಭಾರತ್​ ಜೋಡೋ ನ್ಯಾಯಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಗುವಾಹಟಿಯ ಕೆಲ ರಸ್ತೆಗಳಲ್ಲಿ ಱಲಿಗೆ ನಿಷೇಧ ಹೇರಲಾಗಿತ್ತು.

ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಬೆಂಬಲಿಗರು ಬ್ಯಾರಿಕೇಡ್​​ಗಳನ್ನು ಹತ್ತಿ ಪೊಲೀಸರ ಜೊತೆ ಘರ್ಷಣೆ ನಡೆಸಿದ್ದರು. ತಳ್ಳಾಟ-ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್​ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಕೆಲವು ಬೆಂಬಲಿಗರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿರಾಹುಲ್​​ ಗಾಂಧಿ ವಿರುದ್ಧ ಎಫ್​ಐಆರ್​​ಗೆ ಅಸ್ಸಾಂ ಸಿಎಂ ಸೂಚನೆ.. ಕರ್ನಾಟಕ ಕಾಂಗ್ರೆಸ್​ನಿಂದ ಖಡಕ್​ ಎಚ್ಚರಿಕೆ

ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್‌ ಮಾಡಿರೋ ಸಿಎಂ,​ ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಿದ ಅಸ್ಸಾಂ ಸರ್ಕಾರ; ಅರೆಸ್ಟ್ ಆಗ್ತಾರಾ?

https://newsfirstlive.com/wp-content/uploads/2024/01/RAHUL-GANDHI-4.jpg

Load More