newsfirstkannada.com

×

ಚುನಾವಣಾ ಬಾಂಡ್ ಮೂಲಕ ಸುಲಿಗೆ​; ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

Share :

Published September 28, 2024 at 4:29pm

Update September 28, 2024 at 4:32pm

    ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣ!

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

    ರಾಜ್ಯ ಬಿಜೆಪಿ ನಾಯಕರ ವಿರುದ್ಧವೂ ಎಫ್​ಐಆರ್​ ದಾಖಲಿಸಿದ ಪೊಲೀಸ್ರು

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಕೇಸ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಷ್ಟೇ ಅಲ್ಲ ಜತೆಗೆ ಇಡಿ ಅಧಿಕಾರಿಗಳು, ಕೇಂದ್ರ ಬಿಜೆಪಿ ಪದಾಧಿಕಾರಿಗಳು, ಮಾಜಿ ಸಂಸದ ನಳೀನ್​ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಎಫ್​ಐಆರ್​​ ಮಾಡಲಾಗಿದೆ.

ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮಕ್ಕೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಎಂಬುವರು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರು ನೀಡಿದ್ರು. ದೂರಿನ ವಿಚಾರಣೆ ನಡೆಸಿದ ಕೋರ್ಟ್​​ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿತ್ತು.

ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ!

ಕೋರ್ಟ್​ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿತ್ತು. ಈ ಕೂಡಲೇ ಎಚ್ಚೆತ್ತ ತಿಲಕ್ ನಗರ ಪೊಲೀಸರು ನಿರ್ಮಲಾ ಸೀತಾರಾಮನ್​ ವಿರುದ್ಧ ಎಫ್​ಐಆರ್​ ಮಾಡಿದ್ದಾರೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಷ್ಟೇ ಅಲ್ಲ ಅರ್ಜಿದಾರರ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು, ಕೇಸ್​​ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

ಚುನಾವಣಾ ಬಾಂಡ್ ಎಂದರೇನು?

2018ರಲ್ಲಿ ರಾಜಕೀಯ ಪಕ್ಷಗಳಿಗೆ ಹರಿದು ಬರುತ್ತಿರೋ ಕಪ್ಪು ಹಣವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್​​ ಅನ್ನು ಜಾರಿಗೆ ತಂದಿತ್ತು. ದೇಣಿಗೆ ಪ್ರಕ್ರಿಯೆ ಪಾರದರ್ಶಕವಾಗಿ ಇರಲಿ ಎಂಬ ಕಾರಣಕ್ಕೆ ಇದು ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್​​; ನಿರ್ಮಲಾ ಸೀತಾರಾಮನ್ ವಿರುದ್ಧ FIR

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಚುನಾವಣಾ ಬಾಂಡ್ ಮೂಲಕ ಸುಲಿಗೆ​; ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

https://newsfirstlive.com/wp-content/uploads/2024/09/BY-Vijayendra.jpg

Load More