newsfirstkannada.com

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ​ಎಫ್​ಐಆರ್​​.. ಅಸಲಿಗೆ ಆಗಿದ್ದೇನು?

Share :

Published March 20, 2024 at 10:35pm

Update March 21, 2024 at 6:07am

    ಹನುಮಾನ್ ಚಾಲೀಸ ಹಾಕಿದ್ದಕ್ಕೆ ಗಲಾಟೆ ಮಾಡಿದ್ದ ಪ್ರಕರಣ!

    ಈ ಘಟನೆ ಬಗ್ಗೆ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ

    ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ​ಎಫ್​ಐಆರ್​

ಬೆಂಗಳೂರು: ಹನುಮಾನ್ ಚಾಲೀಸ ಹಾಕಿದ್ದಕ್ಕೆ ಗಲಾಟೆ ಮಾಡಿದ್ದ ಪ್ರಕರಣ ಸಂಬಂಧ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಹಲಸೂರು ಗೇಟ್ ಪೊಲೀಸ್ರು ಎಫ್​​ಐಆರ್​ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹೊತ್ತಲ್ಲೇ ತೇಜಸ್ವಿ ಸೂರ್ಯ ಬಿಜೆಪಿ ಕಾರ್ಯಕರ್ತರನ್ನು ಸೇರಿಸಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ಮತೀಯ ಭಾವನೆಗಳನ್ನು ಕೆರಳಿಸುವ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿಲಾಗಿತ್ತು.

ಸದ್ಯ ಚಿಕ್ಕಪೇಟೆ ನಿವಾಸಿ ಸಾವಿತ್ರಿ ಎನ್ನುವವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಹಲಸೂರು ಗೇಟ್​ ಪೊಲೀಸ್ರು ತೇಜಸ್ವಿ ಸೂರ್ಯ ವಿರುದ್ಧ ಐಪಿಸಿ ಸೆಕ್ಷನ್ 153(ಎ), 295 (ಎ), 123 (3ಎ) ಅಡಿಯಲ್ಲಿ ಕೇಸ್​ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ​ಎಫ್​ಐಆರ್​​.. ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2023/12/TEJASWI-SURYA.jpg

Load More