/newsfirstlive-kannada/media/post_attachments/wp-content/uploads/2025/07/TRAIN-FIRE-1.jpg)
ತಮಿಳುನಾಡಿನಲ್ಲಿ ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ (Goods train) ಭಾರೀ ಬೆಂಕಿ ಅವಘಡ ಸಂಭವಿಸಿದೆ. ಬೆಳಗ್ಗೆ 5.30ಕ್ಕೆ ತಿರುವಳ್ಳೂರು ರೈಲ್ವೇ ನಿಲ್ದಾಣದ ಹತ್ತಿರ ಹೊತ್ತಿ ಉರಿದಿದೆ. ಬೆಂಕಿ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ರೈಲಿನ ನಾಲ್ಕು ವ್ಯಾಗನ್‌ಗಳಲ್ಲಿ (Train wagon) ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀತಿ ಉಂಟಾಗಿತ್ತು. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಕಾಣಿಸುತ್ತಿತ್ತು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ನಿಧನ
ದುರ್ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ರಕ್ಷಣಾ ತಂಡಗಳು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಈ ಹಂತದಲ್ಲಿ ಜೀವಕ್ಕೆ ಯಾವುದೇ ಅಪಾಯವಿಲ್ಲ. ನಮ್ಮ ತಂಡಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿವೆ. ಟ್ರೈನ್​ನಲ್ಲಿ ಡೀಸೆಲ್ ಇದ್ದರಿಂದ ಸವಾಲು ಆಗಿತ್ತು ಅಂತಾ ಅಧಿಕಾರಿಗಳು ತಿಳಿಸಿದ್ದಾರೆ. ಗೂಡ್ಸ್​ ಟ್ರೈನ್ ಮನಾಲಿಯಿಂದ ತಿರುಪತಿಗೆ ಬರುತ್ತಿತ್ತು ಎನ್ನಲಾಗಿದೆ. ಬೆಂಕಿ ಅನಾಹುತದಿಂದ ಚೆನ್ನೈ ರೈಲು ಮಾರ್ಗಗಳ ಸೇವೆಯಲ್ಲಿ ವಿಳಂಬವಾಗಿದೆ.
ಇದನ್ನೂ ಓದಿ: ಕೋಟ ಶ್ರೀನಿವಾಸ ರಾವ್ ನಿಧನ.. ‘ನಮ್ಮ ಬಸವ’ ಸೇರಿ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು..
#BREAKING Fire accident involving a goods train near Tiruvallur, where the fire has spread to five wagons. This incident has caused significant disruption, blocking all trains passing through #Tiruvallur. @TheFederal_News@RailMinIndiapic.twitter.com/PGf3gGEgnG
— Mahalingam Ponnusamy (@mahajournalist) July 13, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ