newsfirstkannada.com

ಡ್ರಗ್ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ: 32 ಸಾವು, 17 ಮಂದಿ ಸ್ಥಿತಿ ಗಂಭೀರ

Share :

03-11-2023

    ಡ್ರಗ್‌ ಸೇರಿ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ

    ಗಂಭೀರವಾಗಿ ಗಾಯಗೊಂಡ 16 ಮಂದಿ ಸ್ಥಳೀಯ ಆಸ್ಪತ್ರೆಗೆ ದಾಖಲು

    ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಟೆಹರಾನ್: ಡ್ರಗ್ ಸೇರಿದಂತೆ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿದೆ. ಈ ಅವಘಡದಲ್ಲಿ 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಟೆಹ್ರಾನ್‌ನಿಂದ 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮುಂಜಾನೆ ಬೆಂಕಿ ಹೊತ್ತಿಕೊಂಡಾಗ ಪುನರ್ವಸತಿ ಕೇಂದ್ರದಲ್ಲಿ ಎಷ್ಟು ಮಂದಿ ಕೆಲಸ ಮಾಡುತ್ತಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಟ್ಟು 40 ಮಂದಿ ಮಾದಕ ವ್ಯಸನಿಗಳ ಕೇಂದ್ರ ಇದಾಗಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಇನ್ನೂ ಈ ಅವಘಡಕ್ಕೆ ಏನು ಕಾರಣ ಎಂದು ಪೊಲೀಸ್​​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡ್ರಗ್ ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ: 32 ಸಾವು, 17 ಮಂದಿ ಸ್ಥಿತಿ ಗಂಭೀರ

https://newsfirstlive.com/wp-content/uploads/2023/11/fire-23.jpg

Load More