ಪಟಾಕಿ ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಗಳು ಬೆಂಕಿಗಾಹುತಿ
ಬೆಂಕಿಯಿಂದ 9 ಜನರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು
ಮಥುರಾ: ಬೆಂಗಳೂರಿನಲ್ಲಿ ನಡೆದಂತೆಯೇ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಗೋಪಾಲ್ಬಾಗ್ ಪ್ರದೇಶದಲ್ಲಿ ಪಟಾಕಿ ಅಂಗಡಿಗೆ ಬೆಂಕಿ ಬಿದ್ದಿದೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ಏಳು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಕನಿಷ್ಠ ಒಂಭತ್ತು ಜನರು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕಾರಿಯೊಬ್ಬರು ಹಂಚಿಕೊಂಡ ಮಾಹಿತಿ ಪ್ರಕಾರ, ಪಟಾಕಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಉಳಿದ ಅಂಗಡಿಗಳಿಗೂ ಬೆಂಕಿ ಪಸರಿಸಿದೆ.
ಸ್ಟೇಷನ್ ಹೌಸ್ ಆಫೀಸರ್ ಅಜಯ್ ಕಿಶೋರ್ ಈ ಬಗ್ಗೆ ಮಾತನಾಡಿ, ‘‘ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ’’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ