/newsfirstlive-kannada/media/post_attachments/wp-content/uploads/2025/01/FIRE-BREAKS.jpg)
ಪ್ರಯಾಗರಾಜ್ನ ಚಟ್ನಾಗ್ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಬೆಂಕಿಯ ಅವಘಡ ಸಂಭವಿಸಿದೆ. ತೆರೆದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಕೆಲವು ಟೆಂಟ್ಗಳಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ ಆದ್ರೆ, ಕೆಲವು ಸಾಧುಗಳಿಗೆ ಸುಟ್ಟ ಗಾಯಗಳಾಗಿದ್ದು ವರದಿಯಾಗಿದೆ. ಜುನ್ನಾ ಅಖಾಡದಲ್ಲಿ ಈ ಒಂದು ಅವಘಢ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕೆಲವು ಟೆಂಟ್ಗಳು ಸುಟ್ಟು ಕರಕಲಾಗಿವೆ.
ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದು ಯಾವುದೇ ರೀತಿಯ ಪ್ರಾಣಾಪಾಯ ಯಾರಿಗೂ ಆಗಿಲ್ಲ ಎಂದು ಹೇಳಿದೆ. ಕೆಲವು ದಿನಗಳ ಹಿಂದಷ್ಟೇ ಸಿಲಿಂಡರ್ ಬ್ಲಾಸ್ಟ್ ಆಗಿ ಇದೇ ಕುಂಭಮೇಳದಲ್ಲಿ ದೊಡ್ಡ ಮಟ್ಟದ ಬೆಂಕಿ ಅವಘಢ ಸಂಭವಿಸಿತ್ತು. ಈಗ ಎರಡನೇ ಬಾರಿ ಇಂತಹ ಅವಘಢ ಸಂಭವಿಸಿದ್ದು ಯಾತ್ರಾರ್ಥಿಗಳು ಕೊಂಚ ಆತಂಕಕ್ಕೆ ಈಡಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ