ಕನ್ನಡ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ಆರೋಪ
ಲೈಂಗಿಕ ಕಿರುಕುಳ ಕುರಿತು ಅಧ್ಯಯನಕ್ಕೆ ಸಮಿತಿ ರಚನೆಗೆ ಆಗ್ರಹ
ನಟ ಸುದೀಪ್, ಚೇತನ್ ಸೇರಿ ಹಲವರಿಂದ ಮುಖ್ಯಮಂತ್ರಿಗೆ ಪತ್ರ
ಇತ್ತೀಚೆಗಷ್ಟೇ ಮಲಯಾಳಂ ಚಿತ್ರರಂಗದಲ್ಲಿ ನಟಿಯರು ಎದುರಿಸುತ್ತಿರೋ ಲೈಂಗಿಕ ಕಿರುಕುಳ ಕುರಿತಾದ ನ್ಯಾಯಮೂರ್ತಿ ಕೆ ಹೇಮಾ ಸಮಿತಿ ವರದಿ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಅನೇಕ ಮಲಯಾಳಂ ಸಿನಿಮಾ ನಟ ಮತ್ತು ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಈಗ ಇದೇ ರೀತಿ ಕಮಿಟಿ ರಚನೆಯಾಗಬೇಕು ಎಂದು ಕನ್ನಡ ಚಿತ್ರರಂಗದ ಫೈರ್ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಹಿಂದೆ ತೆಲುಗು ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕುರಿತು ಅಧ್ಯಯನಕ್ಕಾಗಿ ಸಮಿತಿ ರಚಿಸಿ ಎಂದು ನಟಿ ಸಮಂತಾ ಸೇರಿಂದತೆ ಟಾಲಿವುಡ್ ಹಲವು ಸೆಲಬ್ರಿಟಿಗಳು ತೆಲಂಗಾಣ ಸರ್ಕಾರದ ಮೇಲೆ ಒತ್ತಡ ಹಾಕಿದ್ರು. ಈಗ ಕನ್ನಡ ಚಿತ್ರರಂಗದಲ್ಲೂ ಈ ರೀತಿ ಕೂಗು ಕೇಳಿ ಬಂದಿದೆ.
ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರೋ ಸಂಸ್ಥೆ FIRE. ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (FIRE) ಸಂಸ್ಥೆಯಲ್ಲಿ ನಟ ಚೇತನ್ ಅಹಿಂಸಾ, ನಿರ್ದೇಶಕಿ ಕವಿತಾ ಲಂಕೇಶ್ ಇದ್ದಾರೆ. ಇವರೇ ಇದರ ನೇತೃತ್ವ ವಹಿಸಿದ್ದು, ನಿವೃತ್ತ ನ್ಯಾಯಾಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಆಗ್ರಹಿಸಿದ್ದಾರೆ.
FIRE ಸಂಸ್ಥೆ ಡಿಮ್ಯಾಂಡ್ ಏನು?
ಕನ್ನಡ ಚಲನಚಿತ್ರೋದ್ಯಮದಲ್ಲೂ ಮಹಿಳೆಯರು ಲೈಂಗಿಕ ಕಿರುಕುಳ ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ಕುರಿತು ಅಧ್ಯಯನ ಮಾಡಿ ವರದಿ ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ಎಂದು ಫೈರ್ ಡಿಮ್ಯಾಂಡ್ ಇಟ್ಟಿದೆ. ಫೈರ್ ಸಂಸ್ಥೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ನಟಿ ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ. ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್‌ಕುಮಾರ್, ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕಿದ್ದಾರೆ.
ಇದನ್ನೂ ಓದಿ: ವಾಶ್ ಮಾಡಿದ್ದ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ; ಏನಿದು ಲುಮಿನಲ್ ಟೆಸ್ಟ್?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ