newsfirstkannada.com

Train Fire: ಪ್ರಯಾಣಿಕರಿದ್ದ ರೈಲಿನಲ್ಲಿ ಮತ್ತೊಂದು ಬೆಂಕಿ ಅನಾಹುತ; 19 ಮಂದಿಗೆ ಸುಟ್ಟ ಗಾಯ

Share :

16-11-2023

    ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ

    ಮಧ್ಯರಾತ್ರಿ 2.30ಕ್ಕೆ ನಡೆದಿರುವ ಅಗ್ನಿ ಅನಾಹುತ

    ರೈಲು ಬೋಗಿ ಎಸ್​-6ನಲ್ಲಿ ಕಾಣಿಸಿಕೊಂಡ ಬೆಂಕಿ

ಉತ್ತರ ಪ್ರದೇಶದ ಇಟವಾ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿ-ಸಹರ್ಸಾ ವೈಶಾಲಿ ಸೂಪರ್​ಫಾಸ್ಟ್ ಎಕ್ಸ್​ಪ್ರೆಸ್​ ರೈಲಿನ ಒಂದು ಕೋಚ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿಷಯ ಗೊತ್ತಾಗುತ್ತಿದ್ದಂತೆಯೇ ಅಗ್ನಿಶಾಮ ಸಿಬ್ಬಂದಿ ಸ್ಥಳಕ್ಕೆ ಡೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗಾಬರಿಗೊಂಡ ಪ್ರಯಾಣಿಕರು ಬೋಗಿಯಿಂದ ಇಳಿದು ವೀಕ್ಷಣೆ ಮಾಡುತ್ತಿರೋದನ್ನು ನೋಡಬಹುದು.

ಬಿಹಾರದ ಶಹರ್ಸಾ ದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿತ್ತು. ಬೋಗಿ ಎಸ್​-6 ನಲ್ಲಿ ಮಧ್ಯರಾತ್ರಿ 2.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೇ ಇಲಾಖೆ ಅಧಿಕಾರಿ ಉದಯ್ ಶಂಕರ್ ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಆಗಿಲ್ಲ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Train Fire: ಪ್ರಯಾಣಿಕರಿದ್ದ ರೈಲಿನಲ್ಲಿ ಮತ್ತೊಂದು ಬೆಂಕಿ ಅನಾಹುತ; 19 ಮಂದಿಗೆ ಸುಟ್ಟ ಗಾಯ

https://newsfirstlive.com/wp-content/uploads/2023/11/Train-Fire.jpg

Load More