Advertisment

ದೇಶದ ಇತಿಹಾಸದಲ್ಲೇ ಮೊದಲು.. ರಾಷ್ಟ್ರಪತಿ ಭವನದಲ್ಲಿ ಮದುವೆ ಸಂಭ್ರಮ; ಯಾರು ಈ ಪೂನಂ ಗುಪ್ತಾ?

author-image
admin
Updated On
ದೇಶದ ಇತಿಹಾಸದಲ್ಲೇ ಮೊದಲು.. ರಾಷ್ಟ್ರಪತಿ ಭವನದಲ್ಲಿ ಮದುವೆ ಸಂಭ್ರಮ; ಯಾರು ಈ ಪೂನಂ ಗುಪ್ತಾ?
Advertisment
  • ಮೊದಲ ಬಾರಿಗೆ ರಾಷ್ಟ್ರಪತಿ ಭವನ ಮದುವೆಯ ಸಮಾರಂಭ
  • CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾಗೆ ಅದೃಷ್ಟ!
  • ತಮ್ಮ ಕರ್ತವ್ಯ ನಿಷ್ಠೆ ಮೆರೆದು ಸೈ ಎನಿಸಿಕೊಂಡಿರುವ ಪೂನಂ

ನವದೆಹಲಿ: ದೇಶದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆಯ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ PSO ಆಗಿರುವ CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾಗೆ ಇಂತಹ ಅದೃಷ್ಟ ಒಲಿದು ಬಂದಿದೆ.

Advertisment

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರು ರಾಷ್ಟ್ರಪತಿ ಭವನದಲ್ಲಿ ಮದುವೆಯಾಗಲು ವಿಶೇಷ ಅನುಮತಿ ನೀಡಿದ್ದಾರೆ. ಇದೇ ಫೆಬ್ರವರಿ 12ರಂದು ಇಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಪೂನಂ ಗುಪ್ತಾ ಅವರ ಮದುವೆ ನಿಗದಿಯಾಗಿದೆ.

publive-image

CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರು ಜಮ್ಮು-ಕಾಶ್ಮೀರದಲ್ಲಿ CRPF ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪೂನಂ ಗುಪ್ತಾ, ಅವನೀಶ್ ಮದುವೆಗೆ ಸಂಬಂಧಿಕರು ಕೆಲ ಸ್ನೇಹಿತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

publive-image

ಪೂನಂ ಗುಪ್ತಾ ಯಾರು?
ಪೂನಂ ಗುಪ್ತಾ ಅವರು 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು. ಸದ್ಯ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ (PSO) ಸೇವೆ ಸಲ್ಲಿಸುತ್ತಿದ್ದಾರೆ. ಪೂನಂ ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ, ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ BEd ಪದವಿ ಪಡೆದುಕೊಂಡಿದ್ದಾರೆ. 2018ರ ಯುಪಿಎಸ್‌ಸಿ ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ 81ನೇ Rank ಪಡೆದಿದ್ದಾರೆ. ಬಿಹಾರದ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದ ಪೂನಂ ಆ ಬಳಿಕ ಕಠಿಣ ಪ್ರದೇಶಗಳಲ್ಲೂ ತಮ್ಮ ಕರ್ತವ್ಯ ನಿಷ್ಠೆ ಮೆರೆದು ಸೈ ಎನಿಸಿಕೊಂಡಿದ್ದಾರೆ.

Advertisment

ಇದನ್ನೂ ಓದಿ: ಸೋನಿಯಾ ವಿರುದ್ಧ ರಾಷ್ಟ್ರಪತಿಗೆ ಅವಮಾನ ಮಾಡಿದ ಆರೋಪ.. ಟೀಕಿಸುವ ಭರದಲ್ಲಿ ಹೇಳಿದ್ದೇನು? 

ಸೋಷಿಯಲ್‌ ಮೀಡಿಯಾದಲ್ಲೂ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪೂನಂ, ಆಗಾಗ್ಗೆ ಮಹಿಳಾ ಸಬಲೀಕರಣ ಹಾಗೂ ಸ್ಫೂರ್ತಿದಾಯಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುತ್ತಾರೆ. ಜೊತೆಗೆ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment