/newsfirstlive-kannada/media/post_attachments/wp-content/uploads/2024/06/darshan40.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇಂದು ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಸತತ 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರನ್ನ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 13 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಟ ದರ್ಶನ್ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪೊಲೀಸ್ ವ್ಯಾನ್ನಲ್ಲಿ ಪರಪ್ಪನ ಅಗ್ರಹಾರಕ್ಕೆ ಪ್ರಯಾಣ ನಡೆಸಿದರು. ಈ ವೇಳೆ ದರ್ಶನ್ ಅವರು ಪೊಲೀಸ್ ವ್ಯಾನ್ನಲ್ಲೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳತ್ತ ಕೈ ಬೀಸಿ ಮಾತನಾಡಿದ್ದಾರೆ.
ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅವರು ಬಂಧನವಾದ ಬಳಿಕ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಇಂದು ಪೊಲೀಸ್ ವ್ಯಾನ್ನಲ್ಲಿ ಕೈ ಬೀಸಿ ಮಾತನಾಡಿದ ದರ್ಶನ್ ಅವರು ನನಗೆ ಏನು ಆಗುವುದಿಲ್ಲ. ಹೆದರಬೇಡಿ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.
ಪೊಲೀಸ್ ವ್ಯಾನ್ ಹೊರಗೆ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿದ ದರ್ಶನ್ ಅವರು ತಮ್ಮ ಎಂದಿನ ಶೈಲಿನಲ್ಲಿ ಪ್ಲೈಯಿಂಗ್ ಕಿಸ್ ಕೊಟ್ಟು ನಾನು ಆರಾಮಾಗಿದ್ದೇನೆ. ನನಗೆ ಏನೂ ಆಗಲ್ಲ ಹೆದರಬೇಡಿ ಎಂದಿದ್ದಾರೆ.
ನಟ ದರ್ಶನ್ ಅವರು ಕೊಲೆ ಕೇಸ್‌ನಲ್ಲಿ ಬಂಧನವಾದ ಬಳಿಕ ಅವರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಬಂಧನದ ಬಳಿಕ ದಾಸ ದರ್ಶನ್ ಮೊದಲ ಬಾರಿಗೆ ಫ್ಯಾನ್ಸ್‌ಗೆ ಮೊದಲ ಸಂದೇಶ ನೀಡಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ವ್ಯಾನ್ನಲ್ಲಿ ನಟ ದರ್ಶನ್ ಅವರು ಪ್ರತಿಕ್ರಿಯೆ ನೀಡಿರೋ ವಿಡಿಯೋ ಸಖತ್ ವೈರಲ್ ಆಗಿದೆ.
ಇಂದು ಕೋರ್ಟ್‌ನಲ್ಲಿ ಆಗಿದ್ದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ದರ್ಶನ್ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.
ದರ್ಶನ್ ಸೇರಿ ನಾಲ್ಕು ಆರೋಪಿಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇಂದು 24ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ತನಿಖಾಧಿಕಾರಿ ಚಂದನ್ ಅವರು ಆರೋಪಿಗಳಾದ ದರ್ಶನ್, ವಿನಯ್, ಧನರಾಜ್ & ಪ್ರದೂಶ್ ಅವರನ್ನು ಕೋರ್ಟ್‌ಗೆ ಕರೆದು ಕೊಂಡು ಬಂದಿದ್ದರು.
ಇದನ್ನೂ ಓದಿ: ‘ದರ್ಶನ್ ಅಭಿಮಾನಿ ಬಳಗದಿಂದ ಬೆದರಿಕೆ’- ಕೋರ್ಟ್‌ನಲ್ಲಿ ಆಘಾತಕಾರಿ ವಿಷಯ ಬಿಚ್ಚಿಟ್ಟ ಪ್ರಸನ್ನ ಕುಮಾರ್!
24ನೇ ಎಸಿಎಂಎಂ ಕೋರ್ಟ್‌ನಲ್ಲಿ ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಮತ್ತವರ ತಂಡ ಹಾಜರಿತ್ತು. ದರ್ಶನ್ & ಇತರ ನಾಲ್ಕು ಆರೋಪಿಗಳ ವಕೀಲರು ಹಾಜರಿದ್ದರು. ಕೋರ್ಟ್‌ನಲ್ಲಿ ಜಡ್ಜ್ ನಿಮಗೆ ಕಸ್ಟಡಿಯಲ್ಲಿ ಏನಾದ್ರೂ ತೊಂದರೆ ಆಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ದರ್ಶನ್ ಅವರು ಇಲ್ಲ ಸ್ವಾಮಿ ಯಾವುದೇ ತೊಂದರೆ ಆಗಿಲ್ಲ ಎಂದರು.
ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿದ್ರಾ. ನಿಮಗೆ ಏನಾದ್ರೂ ಮೆಡಿಕಲ್ ಟ್ರೀಟ್ಮೆಂಟ್ ಅವಶ್ಯಕತೆ ಇದೆಯಾ ಎಂದು ನ್ಯಾಯಾಧೀಶರು ಕೇಳಿದಕ್ಕೆ ಹೌದು ಬೆಳಗ್ಗೆ ಸ್ಟೇಷನ್‌ನಲ್ಲಿ ಮಾಡಿಸಿದ್ರು. ಬೇರೆ ಟ್ರೀಟ್ಮೆಂಟ್ ಅವಶ್ಯಕತೆ ಇಲ್ಲ ಸ್ವಾಮಿ ಎಂದ ದರ್ಶನ್ ಹೇಳಿದ್ದಾರೆ.
ಇದನ್ನೂ ಓದಿ:ಬಂಧನದ ಬಳಿಕ ಸರಿಯಾಗಿ ಆಹಾರ ತಿನ್ನದ ದರ್ಶನ್.. ಇಳಿಕೆ ಕಂಡ ತೂಕ! ಸದ್ಯ ಎಷ್ಟು KG ಇದ್ದಾರೆ ಗೊತ್ತಾ?
ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ನಟ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದಿನಿಂದ 13 ದಿನ ಪರಪ್ಪನ ಅಗ್ರಹಾರ ಜೈಲುವಾಸದಲ್ಲಿರಬೇಕಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧಿತ ಆರೋಪಿಗಳನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಳ್ಳುತ್ತಾರಾ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರಾ ಎಂಬ ಕುತೂಹಲ ಮೂಡಿತ್ತು. ಈ ಕೇಸ್ ಸಂಬಂಧ ನ್ಯಾಯಾಧೀಶರ ಮುಂದೆ ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಆರೋಪಿಗಳನ್ನು ಜೆಸಿಗೆ ನೀಡಲು ಮನವಿ ಮಾಡಿದ್ದರು.
View this post on Instagram
ಪೊಲೀಸರು ಕೃತ್ಯದಲ್ಲಿ ಆರೋಪಿ ಭಾಗಿಯಾಗಿರೋದಕ್ಕೆ ಸೂಕ್ತ ಸಾಕ್ಷಿಗಳಿವೆ. ಈ ನಾಲ್ಕು ಮಂದಿ ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ತೀರಾ ಅಮಾನುಷವಾಗಿ ರೇಣುಕಾಸ್ವಾಮಿಯ ಕೊಲೆ ಮಾಡಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲ. ಎ1 ಪ್ರಚೋದನೆಗೆ ದರ್ಶನ್ ಅಂಡ್ ಟೀಂ ಒಳಗಾಗಿ ಕೃತ್ಯ ಮಾಡಿದೆ. ಕೊಲೆ ಮಾಡಲು ಒಳಸಂಚು ರೂಪಿಸಿ ಬಳಿಕ ಕಿಡ್ನಾಪ್ ಮಾಡಿಸಿದ್ದಾರೆ. ಆನಂತರ ಕಾನೂನು ದುರುಪಯೋಗ ಮಾಡಿಕೊಂಡು ಕೃತ್ಯ ಎಸಗಿದ್ದಾರೆ. ಎಲ್ಲರಿಗೂ ಕೊಲ್ಲುವ ಸಮಾನ ಉದ್ದೇಶವೂ ಕಂಡು ಬಂದಿದೆ. ಸಾಕ್ಷಿ ನಾಶ ಯತ್ನಿಸಿರೋದು ಸಹ ತನಿಖೆಯಲ್ಲಿ ದೃಢವಾಗಿದೆ. ಅದಕ್ಕಾಗಿ ಲಕ್ಷಾಂತರ ರೂಪಾಯಿನ್ನು ಬಳಕೆ ಮಾಡಿದ್ದಾರೆ. ಅದು ಸಹ ನಮ್ಮ ತನಿಖೆಯಲ್ಲಿ ದೃಢವಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದಕ್ಕೆ ತಾಂತ್ರಿಕ, ಭೌತಿಕ ಮತ್ತು ವೈಜ್ಞಾನಿಕ ಸಾಕ್ಷಿ ಇದೆ. ಆರೋಪಿಗೆ ಅಭಿಮಾನಿಗಳ ಬಳಗ ಇದ್ದು ಬೆದರಿಕೆ ಬರ್ತಾ ಇದೆ. ಹೀಗಾಗಿ ದರ್ಶನ್ ಅಂಡ್ ಸಹಚರರನ್ನು ಜೆಸಿಗೆ ನೀಡಲು ಸರ್ಕಾರ ಮನವಿ ಮಾಡಿತ್ತು. ಈಗ ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಮನವಿ ಮೇರೆಗೆ ದರ್ಶನ್ ಮತ್ತು ನಾಲ್ಕು ಆರೋಪಿಗಳನ್ನು 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ