ಮರಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲೇ ಸಾವು
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ
ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ನಜ್ಜುಗುಜ್ಜು
ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿರುವ ದಾರುಣ ಘಟನೆ ಮಾಗಡಿ ಬಳಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎನ್ನಲಾಗಿದೆ. ಮರಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಐವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ: ಮೈಸೂರು ಸಿಲ್ಕ್ ಸೀರೆಗೆ ಸಿಕ್ಕಾಪಟ್ಟೆ ಡಿಮ್ಯಾಂಡ್.. ಕ್ಯೂ ನಿಂತರೂ ಸಿಗುತ್ತಿಲ್ಲ ಸ್ಯಾರಿ; ಕಾರಣವೇನು?
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಮಾರುತಿ ಎರ್ಟಿಗಾ ಕಾರಿನಲ್ಲಿದ್ದವರು ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು. ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿ ಮಾಗಡಿ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿದರು. ನಜ್ಜುಗುಜ್ಜಾದ ಕಾರಿನಲ್ಲಿದ್ದ ಮೃತದೇಹವನ್ನು ಹೊರತೆಗದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಭೀಕರ ಅಪಘಾತದ ದೃಶ್ಯ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ