newsfirstkannada.com

ತೆಲಂಗಾಣದಲ್ಲಿ ಮತ್ತೊಂದು ದುರಂತ; ತೀವ್ರ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು

Share :

Published April 4, 2024 at 7:10am

Update April 4, 2024 at 7:12am

    ಸ್ಫೋಟದ ತೀವ್ರತೆಗೆ 10 ಮಂದಿ ಗಂಭೀರ, ಆಸ್ಪತ್ರೆಯಲ್ಲಿ ಚಿಕಿತ್ಸೆ

    ನಿನ್ನೆ ರಾತ್ರಿ 5 ಗಂಟೆ ಸುಮಾರಿಗೆ ಭೀಕರ ದುರಂತ ಸಂಭವಿಸಿದೆ

    ರಾತ್ರಿ 8 ಗಂಟೆಗೆ ಸುಮಾರಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ತಂದ ಭದ್ರತಾ ಸಿಬ್ಬಂದಿ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ, ಐವರು ಮೃತಪಟ್ಟಿದ್ದು 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿಆರ್‌ ಆರ್ಗಾನಿಕ್ಸ್‌ (SB Organics Limited) ಕಾರ್ಖಾನೆಯಲ್ಲಿ, ರಾಸಾಯನಿಕ ಸೋರಿಯಿಂದಾಗಿ ನಿನ್ನೆ ಸಂಜೆ ಐದು ಗಂಟೆಗೆ ಭೀಕರ ಸ್ಫೋಟ ಸಂಭವಿಸಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಖಾನೆಯಲ್ಲಿ ಸಿಲುಕಿದ್ದ ಕೆಲವು ಕಾರ್ಮಿಕರ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ಭಯಾನಕ ದಾಳಿ; ವಿಡಿಯೋ ನೋಡಿದ್ರೆ ಬೆಚ್ಚಿ ಬೀಳ್ತೀರಿ..

ಗಾಯಗೊಂಡಿರುವ 10 ಮಂದಿಯ ಸ್ಥಿತಿ ಗಂಭೀರ ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ನಿಯಂತ್ರಣಕ್ಕೆ ತರಲಾಗಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಹೊಗೆ ಆವರಿಸಿತ್ತು. ಇದ್ರಿಂದಾಗಿ ಚಂದಾಪುರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮನೆಮಾಡಿತ್ತು. ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಇನ್ನೂ ಮೌಲ್ಯಮಾಪನ ಮಾಡಬೇಕಾಗಿದೆ. ಸಂಗಾರೆಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಾರಣಾಂತಿಕ ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬರ್ತ್​​ಡೇ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿದ್ದಾಗ ಭೀಕರ ಅಪಘಾತ; ತಾಯಿ ಮಗು ಸಾವು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತೆಲಂಗಾಣದಲ್ಲಿ ಮತ್ತೊಂದು ದುರಂತ; ತೀವ್ರ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/04/TELANGANA-1.jpg

Load More