newsfirstkannada.com

ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.. ಆಸ್ಪತ್ರೆಯಲ್ಲಿ ಮಕ್ಕಳ ನರಲಾಟ

Share :

Published March 19, 2024 at 12:27pm

Update March 19, 2024 at 12:28pm

    ಪರಿಶಿಷ್ಟ ಪಂಗಡಕ್ಕೆ ಸೇರಿದ ವಸತಿ ನಿಲಯದ ಮಕ್ಕಳು

    ಬೆಳಗ್ಗೆ ವಗ್ಗರಣೆ ಉಪಹಾರ ಸೇವಿಸಿದ ಬಳಿಕ ಅಸ್ವಸ್ಥ

    ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ ಪೋಷಕರು

ರಾಯಚೂರು: ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅರಕೇರದ ಬಾಲಕಿಯರ ವಸತಿ ನಿಲಯದಲ್ಲಿ ಬೆಳಕಿಗೆ ಬಂದಿದೆ. ವಾಂತಿ ಭೇದಿ ಸೇರಿ ತಲೆ ಸುತ್ತಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಪಟ್ಟಣದ ಪರಿಶಿಷ್ಟ ಪಂಗಡಕ್ಕೆ ಸೇರಿದ ವಸತಿ ನಿಲಯದ ಮಕ್ಕಳು ರಾತ್ರಿ ಚಪಾತಿ ಹಾಗೂ ಕಡಲೆ ಕಾಳು ಊಟ ಮಾಡಿದ್ದರು. ಬೆಳಗ್ಗೆ ವಗ್ಗರಣೆ ಉಪಹಾರ (ಮಂಡಕ್ಕಿ) ಸೇವಿಸಿದ್ದರು. ಬೆಳಗ್ಗೆ ಉಪಹಾರ ಸೇವಿಸಿದ ನಂತರ ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ ಅರಕೆರಾ ಪ್ರಾಥಮಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೋಷಕರು ಬಂದಿದ್ದಾರೆ. ಮಕ್ಕಳ ನರಳಾಟ ಕಂಡು ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಸ್ಥಳಕ್ಕೆ ಡಿಹೆಚ್ಒ ಡಾ ಸುರೇಂದ್ರ ಬಾಬು ಭೇಟಿ ನೀಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.. ಆಸ್ಪತ್ರೆಯಲ್ಲಿ ಮಕ್ಕಳ ನರಲಾಟ

https://newsfirstlive.com/wp-content/uploads/2024/03/Student.jpg

Load More