newsfirstkannada.com

BREAKING: ‘5 ವರ್ಷ ನಾನೇ ಸಿಎಂ, ನಮ್ದೇ ಸರ್ಕಾರ’- ಸಿದ್ದರಾಮಯ್ಯ ಖಡಕ್ ಉತ್ತರ

Share :

02-11-2023

  ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

  ಐದು ವರ್ಷ ನಮ್ದೇ ಸರ್ಕಾರ ಇರುತ್ತೆ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ

  ಸಿಎಂ ಬದಲಾವಣೆ ವಿಚಾರದ ಗೊಂದಲಕ್ಕೆ ಬ್ರೇಕ್‌ ಹಾಕಿದ ಸಿದ್ದರಾಮಯ್ಯ

ವಿಜಯನಗರ: ಐದು ವರ್ಷ ನಮ್ದೇ ಸರ್ಕಾರ ಇರುತ್ತೆ. ನಾನು ಈಗ ಮುಖ್ಯಮಂತ್ರಿ ಇದ್ದೇನೆ. ನಾನೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಬದಲಾವಣೆ ವಿಚಾರದ ಬಗ್ಗೆ ಖಡಕ್ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಐದು ವರ್ಷ ನಮ್ಮದೇ ಸರ್ಕಾರ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್‌ ಆಗಿ ಹೇಳಿದರು.

ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ತೀರ್ಮಾನ ಮಾಡೋದು ಹೈಕಮಾಂಡ್. ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆಯ ಪರ, ವಿರೋಧದ ಕೂಗಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೈ ಬ್ರೇಕ್ ಹಾಕಿದ್ದಾರೆ.

ಇನ್ನು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅವರು ಸೊತಿದ್ದಾರೆ, ಬೇರೆ ಕೆಲಸ ಇಲ್ಲದ್ದೇ ಬಾಯಿಗೆ ಬಂದಂಗೆ ಮಾತಾಡ್ತಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡ್ತೇವೆ. ಬಿಜೆಪಿ ಭ್ರಮ ನಿರಸವಾಗಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗಲ್ಲ. ಮತ್ತೆ ಆಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ‘5 ವರ್ಷ ನಾನೇ ಸಿಎಂ, ನಮ್ದೇ ಸರ್ಕಾರ’- ಸಿದ್ದರಾಮಯ್ಯ ಖಡಕ್ ಉತ್ತರ

https://newsfirstlive.com/wp-content/uploads/2023/11/Cm-Siddaramaiah.jpg

Load More