newsfirstkannada.com

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ; 40% ಲಂಚ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ

Share :

18-08-2023

  ಬಿಜೆಪಿ ಸರ್ಕಾರದಲ್ಲಿ ಅವಧಿಯಲ್ಲಿ 40% ಲಂಚದ ಆರೋಪ

  ಕಾಮಗಾರಿಗಳಿಗೆ, ಬಿಲ್​ಗಳಿಗೆ ಲಂಚ ಕೊಡಬೇಕೆಂಬ ಆರೋಪ

  ನ್ಯಾ. ನಾಗಮೋಹನ್ ದಾಸ್ ಅಧ್ಯಕ್ಷತೆಯ ಸಮಿತಿಯಿಂದ ತನಿಖೆ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಪಿಸಿದ್ದ 40 ಪರ್ಸೆಂಟ್​ ಕಮೀಷನ್​ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರ, ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆ ಅಡಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಸ್ಥಳ ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡಿ ವಿವರವಾದ ತನಿಖೆ ನಡೆಸಿ ಲೋಪದೋಷಗಳ ಮಾಹಿತಿ ಹಾಗೂ ಅದಕ್ಕೆ ಕಾರಣವಾದ ಆರೋಪಿಗಳನ್ನು ಪತ್ತೆ ಮಾಡಿ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು. ಸಮಿತಿಗೆ ಬೇಕಾದ ದಾಖಲೆಗಳನ್ನು ಆಯಾಯ ಇಲಾಖೆಯ ಅಧಿಕಾರಿಗಳು ಸಲ್ಲಿಸಬೇಕು. ಅಲ್ಲದೇ ತನಿಖೆಗೆ ಬೇಕಾಗುವ ಆರ್ಥಿಕ, ತಾಂತ್ರಿಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ತನಿಖೆಗೆ ವಹಿಸಿದ ಸಿದ್ದು ಸರ್ಕಾರ

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಅಲ್ಲದೇ ಕಮಿಷನ್​ ಕುರಿತು ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದ್ದರು. ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್, ಗೋವಿಂದ ಕಾರಜೋಳ ಮತ್ತು ತೋಟಗಾರಿಕೆ ಸಚಿವರಾಗಿದ್ದ ಮುನಿರತ್ನ ಸೇರಿದಂತೆ ಆವಾಗಿನ ಕೆಲವು ಸಚಿವರ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಸಚಿವರಿಗೆ ಚೆಕ್ ಮೂಲಕ ಕಮೀಷನ್ ಸಂದಾಯವಾಗುತ್ತಿದೆ ಎಂದು ಹೇಳಲಾಗಿತ್ತು. ಹೀಗಾಗಿ ಮುನಿರತ್ನ ಅವರು ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದರಿಂದ ವೈಯಾಲಿಕಾವಲ್ ಪೊಲೀಸರು ಕೆಂಪಣ್ಣ ಸೇರಿದಂತೆ ಇತರೆ ಐವರನ್ನು ಬಂಧಿಸಿದ್ದರು.

ಇಲಾಖೆಗಳಲ್ಲಿ ಟೆಂಡರ್​, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಇತರೆ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಡಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ; 40% ಲಂಚ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ

https://newsfirstlive.com/wp-content/uploads/2023/08/BOMMAI_KEMPANNA.jpg

Load More