ಕಾಂಗ್ರೆಸ್ ಪಕ್ಷದಿಂದಲೂ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು
ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ
ಚಿಕ್ಕಮಗಳೂರು: ಮಾಜಿ ಸಚಿವ ಡಿ ಬಿ ಚಂದ್ರೇಗೌಡ ನಿಧನರಾಗಿದ್ದಾರೆ. 87 ವಯಸ್ಸಿನ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ದಾರದಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಮೂಡಿಗೆರೆಯಬಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ (ಬುಧವಾರ) ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿಕ್ಕಿದೆ.
ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.
ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು… pic.twitter.com/vkW0lPkVFj
— Basavaraj S Bommai (@BSBommai) November 7, 2023
ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ…
— B.S.Yediyurappa (@BSYBJP) November 7, 2023
ಬಿ ಎ ಎಲ್ ಎಲ್ ಬಿ ವ್ಯಾಸಂಗ ಮಾಡಿದ್ದ ಡಿ ಬಿ ಚಂದ್ರೇಗೌಡ, 1971 ಹಾಗೂ 1977 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾಗಿದ್ದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಮುಂದಾಗಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷದಲ್ಲಿದ್ದ ದಿ ಬಿ ಚಂದ್ರೇಗೌಡ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ಮೂಲಕ ಇಂದಿರಾ ಗಾಂಧಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಅಂದಹಾಗೆಯೇ ಆ ಚುನಾವಣೆಯಲ್ಲಿ ಇಂದಿರಾಗಾಂಧಿ ಗೆಲುವನ್ನು ಸಾಧಿಸಿದ್ದರು. ಇದಲ್ಲದೆ, ಜೀವನದ ಹೆಚ್ಚಿನ ಸಮಯವನ್ನು ರಾಜಕೀಯದಲ್ಲಿ ಕಳೆದಿದ್ದ ಚಂದ್ರೇಗೌಡರು ತೀರ್ಥಹಳ್ಳಿ ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ