ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲು ಮುಂದಾದ ಸರ್ಕಾರ
ರಾಜಕೀಯ ಕಾರಣಕ್ಕಾಗಿ NEP ರದ್ದು ಮಾಡೋದು ಸರಿಯಲ್ಲ
NEP ನೀತಿ ಮಾಡಿರೋದು ನಮ್ಮ ರಾಜ್ಯದ ಕಸ್ತೂರಿ ರಂಗನ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರೋ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ಖುದ್ದು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದಲೇ NEPಯನ್ನು ರದ್ದುಗೊಳಿಸಲಾಗುವುದು ಎಂದಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರ ಬಿಜೆಪಿ ನಾಯಕರನ್ನು ಕೆರಳಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ. ರಾಜಕೀಯ ಕಾರಣಕ್ಕಾಗಿ NEP ರದ್ದು ಮಾಡೋದು ಸರಿಯಲ್ಲ. ಈಗಿನ ಸನ್ನಿವೇಶಕ್ಕೆ ಎನ್‌ಇಪಿ ಸೂಕ್ತ ಶೈಕ್ಷಣಿಕ ವ್ಯವಸ್ಥೆಯಾಗಿದೆ. NEP ನೀತಿ ಮಾಡಿರೋದು ಕಸ್ತೂರಿ ರಂಗನ್ ಅವರು. ಎಲ್ಲಾ ರಾಜ್ಯಗಳಲ್ಲಿರುವ NEP ನಮ್ಮ ರಾಜ್ಯದಲ್ಲೇ ಇಲ್ಲ ಅಂದ್ರೆ ಹೇಗೆ? ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪುನರ್ ವಿಮರ್ಶಿಸಬೇಕು. ಕಾಮಾಲೆ ಕಣ್ಣಿಂದ ಸಿಎಂ NEPಯನ್ನು ನೋಡೋದು ಬೇಡ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ NEP ರದ್ದು; ಸಿಎಂ ಸಿದ್ದರಾಮಯ್ಯ ಘೋಷಣೆ
2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಕರ್ನಾಟಕದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿದ್ದರು. NEPಗೆ ಏಕಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ನಾಯಕರ ಈ NEP ರಾಜಕೀಯದಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ