newsfirstkannada.com

ಕೋವಿಡ್ ನಂತರ ಆರೋಗ್ಯವಾಗಿದ್ದವರಿಗೆ ಹೆಚ್ಚು ಹೃದಯಾಘಾತ.. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಎಚ್ಚರಿಕೆ

Share :

07-08-2023

    ಕೋವಿಡ್ ನಂತರ ಚಿಕ್ಕ ವಯಸ್ಸಿನವರಿಗೆ ಹೆಚ್ಚು ಹೃದಯಾಘಾತ

    ಪ್ರತಿಯೊಬ್ಬರು ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು

    ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಇಡೀ ಸ್ಯಾಂಡಲ್‌ವುಡ್‌ಗೆ ಆಘಾತ ತಂದಿದೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಚಿನ್ನೇಗೌಡರ ಹಿರಿಯ ಸೊಸೆ ಸ್ಪಂದನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

‘ಕೋವಿಡ್ ನಂತರ ಇಂತಹ ಘಟನೆಗಳು ಹೆಚ್ಚು’
ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಸಂತಾಪ ಸೂಚಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದವರಿಗೆ ಇಂತಹ ಸಾವು ಆಗಬಹುದು ಅನ್ನೋದನ್ನ ಯಾರು ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ. ಕೋವಿಡ್ ನಂತರ ಇಂತಹ ಜೀವ ಹಾನಿ ಆಗುವ ಘಟನೆಗಳು ಆಗುತ್ತಾ ಇದೆ. ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

‘ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತ’
ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದಾರೆ.

‘ಸುದ್ದಿ ಕೇಳಿ ತೀವ್ರ ಆಘಾತ’
ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಸಹ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೋವಿಡ್ ನಂತರ ಆರೋಗ್ಯವಾಗಿದ್ದವರಿಗೆ ಹೆಚ್ಚು ಹೃದಯಾಘಾತ.. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಎಚ್ಚರಿಕೆ

https://newsfirstlive.com/wp-content/uploads/2023/08/HD-KUmaraswamy-on-Spandana.jpg

Load More