newsfirstkannada.com

ಮಾಜಿ ಸಿಎಂ ಹೆಚ್​ಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿ.. ವಿಶ್ರಾಂತಿ ತೆಗೆದುಕೊಂಡು ಪ್ರಚಾರದಲ್ಲಿ ಭಾಗಿ

Share :

Published March 21, 2024 at 1:06pm

    ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದ ಎಚ್.​ಡಿ ಕುಮಾರಸ್ವಾಮಿ

    ವೈದ್ಯರ ಸೂಚನೆಯಂತೆ ಇಂದು ಬೆಳಗ್ಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ

    2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಚುನಾವಣಾ ಪ್ರಚಾರದಲ್ಲಿ ಭಾಗಿ

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಗಾಗಿ ಚೆನ್ನೈಗೆ ತೆರಳಿದ್ದರು. ಇಂದು ಬೆಳಗ್ಗೆ ಅವರ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹೆಚ್​ಡಿಕೆಗೆ ನಡೆದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪೋಸ್ಟರ್​ ಹಂಚಿಕೊಂಡಿದ್ದಾರೆ. ಪೋಸ್ಟರ್​ನಲ್ಲಿ 2-3 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಬಳಿಕ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.

ಮಾರ್ಚ್​ 19ರಂದು ಹೆಚ್​ಡಿಕೆ ಚೆನ್ನೈ ತೆರಳುತ್ತಿದ್ದರು. ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಚೆನ್ನೈಗೆ ಹೋಗಿದ್ದರು. ತಪಾಸನೆ ಬಳಿಕ ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಅದರಂತೆ ಇಂದು ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಿಎಂ ಹೆಚ್​ಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿ.. ವಿಶ್ರಾಂತಿ ತೆಗೆದುಕೊಂಡು ಪ್ರಚಾರದಲ್ಲಿ ಭಾಗಿ

https://newsfirstlive.com/wp-content/uploads/2024/03/HDK-3.jpg

Load More