/newsfirstlive-kannada/media/post_attachments/wp-content/uploads/2024/05/SM-Krishna.jpg)
ಬೆಂಗಳೂರು: ಮಾಜಿ ಸಿಎಂ ಮತ್ತು ಹಿರಿಯ ಬಿಜೆಪಿ ನಾಯಕ ಎಸ್.ಎಮ್ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹಾಗಾಗಿ ಹಿರಿಯ ನಾಯಕರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಎಸ್.ಎಮ್ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಇವರು ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿತ್ತು. ಈ ಕೂಡಲೇ ಎಸ್.ಎಮ್ ಕೃಷ್ಣಾ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.
ಇನ್ನು, ಮೂರು ದಿನಗಳ ಕಾಲ ಆರೋಗ್ಯದ ಮೇಲೆ ನಿಗಾವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಮೂರು ದಿನಗಳ ಕಾಲ ಎಸ್.ಎಮ್ ಕೃಷ್ಣಾ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ.
ಈ ಹಿಂದೆ ಶ್ವಾಸಕೋಶ ಸಮಸ್ಯೆಯಿಂದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ 4 ತಿಂಗಳ ಕಾಲ ಸುದೀರ್ಘ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ