ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ ಲಿಂಗೈಕ್ಯ.. ಗಣ್ಯರಿಂದ ಅಂತಿಮ ನಮನ

author-image
Veena Gangani
Updated On
ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್. ತಿಪ್ಪಣ್ಣ ಲಿಂಗೈಕ್ಯ.. ಗಣ್ಯರಿಂದ ಅಂತಿಮ ನಮನ
Advertisment
  • ವಿರೈಶೈವ ಲಿಂಗಾಯತ ಸಮಾಜದ ಹಿರಿಯ ಮುತ್ಸದ್ದಿ ಎನ್ ತಿಪ್ಪಣ್ಣ ನಿಧನ
  • ಜುಲೈ 11ರಂದು ಬೆಳಗ್ಗೆ 5 ಗಂಟೆಗೆ ಗಾಂಧಿನಗರದ ನಿವಾಸದಲ್ಲಿ ಕೊನೆಯುಸಿರು
  • 3 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, 2 ಬಾರಿ ವಿಧನಾ ಪರಿಷತ್ ಸಭಾಪತಿಯಾಗಿ ಸೇವೆ

ಬಳ್ಳಾರಿ: ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುತ್ಸದ್ದಿ ಎನ್.ತಿಪ್ಪಣ್ಣ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿನ್ನೆ ಜುಲೈ 11ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಗಗನಾಳ ಸಾಧನೆ ಬಗ್ಗೆ ಮನಸಾರೆ ಹಾಡಿ ಹೊಗಳಿದ ಸ್ಟಾರ್​.. ರಮೇಶ್ ಅರವಿಂದ್ ಹೇಳಿದ್ದೇನು..?

publive-image

ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಎನ್.ತಿಪ್ಪಣ್ಣ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು. ಇಂದು ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ವೀರಶೈವ ಲಿಂಗಾಯತ ಸಮಾಜದ ಹಿರಿಯ ರಾಜಕೀಯ ಮುತ್ಸದ್ದಿ ಎನ್ ತಿಪ್ಪಣ್ಣ ನಿಧನ ಹಿನ್ನಲೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. ಜೊತೆಗೆ ಕುಟುಂಬಸ್ಥರಿಗೆ ಸಾಂತ್ವಾನ, ಧೈರ್ಯ ತುಂಬಿದ್ದಾರೆ. 1.30 ಗಂಟೆ ಬಳಿಕ ಎನ್.ತಿಪ್ಪಣ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment