/newsfirstlive-kannada/media/post_attachments/wp-content/uploads/2025/06/Vijaya-Rupani.jpg)
ಗುಜರಾತ್ನ ಅಹ್ಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ( Ahmedabad airport) ಏರ್ ಇಂಡಿಯಾ ವಿಮಾನ (Air India ) ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.
ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿಯಿದ್ದರು. ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ವಿಮಾನ ದುರಂತದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿದೆ.
ಇದನ್ನೂ ಓದಿ: ಗುಜರಾತ್ ವಿಮಾನ ದುರಂತದಲ್ಲಿ ಜೀವ ಕಳೆದುಕೊಂಡ 12 ಮಂದಿ.. ಪತನಗೊಳ್ಳುವ ದೃಶ್ಯ ಸೆರೆ VIDEO
ವಿಮಾನವು ಅಹ್ಮದಾಬಾದ್ನಿಂದ ಲಂಡನ್ಗೆ ಪ್ರಯಾಣಿಸುತ್ತಿತ್ತು. ಏರ್ ಇಂಡಿಯಾದ ‘ಏರ್ ಇಂಡಿಯಾ-171’ ( Air India 171) ಎಂಬ ಹೆಸರಿನ ವಿಮಾನ ಪತನಗೊಂಡಿದೆ. ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Sardar Vallabhbhai Patel International Airport) ಮಧ್ಯಾಹ್ನ 1.10ಕ್ಕೆ ಟೇಕ್ ಅಫ್ ಆಗಿತ್ತು. ವಿಮಾನವು ಲಂಡನ್ನ ಗೆಟ್ವಿಕ್ ವಿಮಾನ ನಿಲ್ದಾಣ (Gatwick Airport in London) ತಲುಪಬೇಕಿತ್ತು.
ಇದನ್ನೂ ಓದಿ: BREAKING: ಅಹಮದಾಬಾದ್ ಏರ್ ಪೋರ್ಟ್ನಲ್ಲಿ ವಿಮಾನ ಪತನ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ