ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸರ್ಕಸ್
ಕರ್ನಾಟಕದಂತೆಯೇ ಹರಿಯಾಣದಲ್ಲೂ ಗ್ಯಾರಂಟಿ ಅಸ್ತ್ರ ಪ್ರಯೋಗ
ಓಬಿಸಿಗೆ 100 ಗಜ ವಿಸ್ತೀರ್ಣದ ಸೈಟ್ ವಿತರಿಸುವುದಾಗಿ ಆಶ್ವಾಸನೆ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಸ್ಕೀಮ್ ಅಸ್ತ್ರವನ್ನು ಪ್ರಯೋಗಿಸಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಯಿತು. ಇದೇ ಸಕ್ಸಸ್ ಮಂತ್ರವನ್ನು ಇಡೀ ದೇಶದ ಉದ್ದಕ್ಕೂ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. ಅದರಂತೆಯೇ ಮುಂಬರುವ ಚುನಾವಣೆಗಾಗಿ ಹರಿಯಾಣದ ಕಾಂಗ್ರೆಸ್ ಪಕ್ಷವೂ ಗ್ಯಾರಂಟಿ ಸ್ಕೀಮ್ ಘೋಷಣೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹರಿಯಾಣದ ಹಿಸ್ಸಾರ್ ನಲ್ಲಿ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪೆನ್ಷನ್ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ . ಹಿರಿಯ ನಾಗರಿಕರ ಪೆನ್ಷನ್ 6 ಸಾವಿರ ರೂಪಾಯಿಗೆ ಹೆಚ್ಚಳ ಮಾಡುವ ಬಗ್ಗೆ ತಿಳಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಅನ್ನು 500 ರೂಪಾಯಿಗೆ ನೀಡುವ ಬಗ್ಗೆ ಹೇಳಿಕೊಂಡಿದ್ದಾರೆ. ಬಡವರಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆ ಘೋಷಿಸಿದ್ದಾರೆ.
ಇವಿಷ್ಟು ಮಾತ್ರವಲ್ಲದೆ, ದಲಿತರು, ಓಬಿಸಿಗೆ 100 ಗಜ ವಿಸ್ತೀರ್ಣದ ಸೈಟ್ ವಿತರಿಸುವುದಾಗಿ ತಿಳಿಸಿದ್ದಾರೆ. ಅದರೊಂದಿಗೆ ಓಬಿಸಿ ಕ್ರಿಮಿಲೇಯರ್ ಆದಾಯದ ಮಿತಿ 6 ಲಕ್ಷದಿಂದ ಹತ್ತು ಲಕ್ಷ ರೂಪಾಯಿಗೆ ಏರಿಕೆ ಮಾಡುವುದಾಗಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ