/newsfirstlive-kannada/media/post_attachments/wp-content/uploads/2024/05/PRAJWAL_REVANNA_2.jpg)
ಬೆಂಗಳೂರು: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ.
ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೋರ್ಟ್‌ನಿಂದ ನೇರವಾಗಿ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತಿದೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟು ಮತ್ತೆ ಒಂದಾಯ್ತು ಜೋಡಿ.. ಪರಸ್ಪರ ತಬ್ಬಿ ಕಣ್ಣೀರು ಇಡುತ್ತ ಮತ್ತೆ ಸತಿ-ಪತಿ ಆಗಿಬಿಟ್ರು..!
ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಆಗ ಜಡ್ಜ್ ನಿಮಗೆ ಕಸ್ಟಡಿಯಲ್ಲಿ ಪೊಲೀಸರು ತೊಂದರೆ ಕೊಟ್ರಾ ಎಂದು ಪ್ರಶ್ನಿಸಿದರು. ಆಗ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಉತ್ತರಿಸಿದ್ದಾರೆ. ಎಸ್‌ಐಟಿ ವಾದ ಆಲಿಸಿದ ಕೋರ್ಟ್ ಜೂನ್ 24ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್.. ಬಸವನಗುಡಿ ಮನೆಯಲ್ಲಿ SIT ತನಿಖಾ ತಂಡಕ್ಕೆ ಸ್ಫೋಟಕ ಸಾಕ್ಷ್ಯ ಪತ್ತೆ?
ಕೋರ್ಟ್‌ಗೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಬಸವನಗುಡಿಯ ಮನೆಗೆ ಕರೆದುಕೊಂಡು ಹೋಗಿದ್ದರು. ಮನೆಯಲ್ಲಿ ಸ್ಥಳ ಮಹಜರು ಮಾಡಿದ ಬಳಿಕ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಯನ್ನು ದಾಖಲಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ