ರಾಬಿನ್ ಉತ್ತಪ್ಪ ಸ್ಪಷ್ಟನೆ.. ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್​ ಹೇಳಿದ್ದೇನು..?

author-image
Bheemappa
Updated On
ಯುವರಾಜ್ ಸಿಂಗ್ ಕರಿಯರ್ ಮುಗಿಸಿದ್ದೇ ಕೊಹ್ಲಿನಾ? ಹೀಗಂತ ಹೇಳಿದ್ದು ಯಾರು ಗೊತ್ತಾ?
Advertisment
  • ನನಗೆ ಹಣ ಮರುಪಾವತಿ ಮಾಡಲು ಕಂಪನಿಗಳು ವಿಫಲವಾಗಿವೆ
  • ಕಂಪನಿಗಳಿಗೂ ತಮಗೂ ಏನು ಸಂಬಂಧ ಇಲ್ಲ ಎಂದು ಹೇಳಿದ್ರಾ?
  • ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ರಾಬಿನ್ ಉತ್ತಪ್ಪ

ಬೆಂಗಳೂರು: ಅರೆಸ್ಟ್ ವಾರೆಂಟ್ ಜಾರಿಯಾದ ಬೆನ್ನಲ್ಲೇ ಭಾರತ ಮಾಜಿ ಕ್ರಿಕೆಟರ್​ ರಾಬಿನ್ ಉತ್ತಪ್ಪ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಪ್ರಸ್ತುತ ಆರೋಪ ಕೇಳಿ ಬಂದಿರುವ ಕಂಪನಿಯ ನಿರ್ದೇಶಕ ಸ್ಥಾನಕ್ಕೆ ಕೆಲ ವರ್ಷಗಳ ಹಿಂದೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದ್ದಾರೆ.

ಕ್ರಿಕೆಟರ್ ರಾಬಿನ್ ಉತ್ತಪ್ಪ ಅವರು ತಮ್ಮ ಮೇಲೆ ಬಂದಿರುವ ಆರೋಪ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕಂಪನಿಗಳಲ್ಲಿ ಉದ್ಯೋಗಿಗಳಿಗೆ ಬಾಕಿಯಿರುವ ಪಿಎಫ್ ಹಣ ಪಾವತಿಸುವಂತೆ ಒತ್ತಾಯಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗಳಿಗೆ ನನ್ನ ಕಾನೂನು ಸಲಹಾ ತಂಡ ಪ್ರತಿಕ್ರಿಯಿಸಿದೆ. ಆ ಕಂಪನಿಗಳಲ್ಲಿ ನನ್ನ ಪಾತ್ರವಿಲ್ಲ ಎಂದು ದೃಢೀಕರಿಸುವ ದಾಖಲೆ ನೀಡಿದ್ದೇನೆ. ಅದರ ಹೊರತಾಗಿ ಪಿಎಫ್ ಅಧಿಕಾರಿಗಳು ಪ್ರಕ್ರಿಯೆ ಮುಂದುವರೆಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಬಗೆಹರಿಸಲು ನನ್ನ ಪರ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಲಿದ್ದಾರೆ ಎಂದು ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:ಕ್ರಿಕೆಟ್ ಸ್ಟಾರ್​ ರಾಬಿನ್ ಉತ್ತಪ್ಪಗೆ ಸಂಕಷ್ಟ.. ಬಂಧನದ ಭೀತಿಯಲ್ಲಿ ಮಾಜಿ ಕ್ರಿಕೆಟರ್..!

publive-image

2018-19ರಲ್ಲಿ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರೀಸ್ ಫ್ಯಾಶನ್ ಹೌಸ್ ಕಂಪನಿಗಳಿಗೆ ಸಾಲದ ರೂಪದಲ್ಲಿ ಹಣಕಾಸು ತೊಡಗಿಸಿದ್ದೆ. ಇದಕ್ಕಾಗಿ ಕಂಪನಿಗಳು ನನ್ನನ್ನ ನಿರ್ದೇಶಕನಾಗಿ ನೇಮಕ ಮಾಡಿದ್ದವು. ಆದರೆ ಇವುಗಳಲ್ಲಿ ಯಾವುದೇ ಸಕ್ರಿಯ ಕಾರ್ಯನಿರ್ವಾಹಕ ಪಾತ್ರ ಹೊಂದಿರಲಿಲ್ಲ. ಇದರ ಜೊತೆ ಕಂಪನಿಗಳ ನಿತ್ಯದ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರಲಿಲ್ಲ ಎಂದು ಹೇಳಿದ್ದಾರೆ.

ವೃತ್ತಿಪರ ಕ್ರಿಕೆಟಿಗ, ಬಳಿಕ ನಿರೂಪಕನಾಗಿ, ವೀಕ್ಷಕ ವಿವರಣೆಗಾರನಾಗಿ ಇದ್ದಿದ್ದರಿಂದ ಕಂಪನಿಗಳ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ಸಮಯವಿರಲಿಲ್ಲ. ಇದುವರೆಗೂ ಹಣ ಹೂಡಿಕೆ ಮಾಡಿದ ಇತರೆ ಕಂಪನಿಗಳಲ್ಲಿಯೂ ಕಾರ್ಯನಿರ್ವಾಹಕನಾಗಿ ಕೆಲಸ ಮಾಡಿಲ್ಲ. ಆದರೆ ಈಗ ಕೇಳಿ ಬಂದಿರುವ ಆರೋಪ ಇರುವ ಕಂಪನಿಗಳು ಸಾಲದ ರೂಪದಲ್ಲಿ ನೀಡಿದ ಹಣವನ್ನು ನನಗೆ ಮರುಪಾವತಿಸಲು ವಿಫಲವಾಗಿವೆ. ಹೀಗಾಗಿ ಹಲವು ವರ್ಷಗಳ ಹಿಂದೆ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈ ಬಗ್ಗೆ ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment