/newsfirstlive-kannada/media/post_attachments/wp-content/uploads/2025/04/K.-Kasturirangan-1.jpg)
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರು ವಿಧಿವಶರಾಗಿದ್ದಾರೆ. ಕೆ. ಕಸ್ತೂರಿ ರಂಗನ್ ಅವರಿಗೆ 84 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ನೆಲೆಸಿದ್ದರು.
ಇಸ್ರೋ ಮುಖ್ಯಸ್ಥರಾಗಿ ಅನೇಕ ರಾಕೆಟ್‌ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಇಸ್ರೋ ಬೆಳವಣಿಗೆಯಲ್ಲಿ ಕಸ್ತೂರಿ ರಂಗನ್ ಅವರ ಅಪಾರ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ: ಎರಡು ಜೀವ ಉಳಿಸಿದ ಹಸಿವು.. ಹನಿಮೂನ್ಗೆ ಬಂದ ಜೋಡಿ ಪಾರಾಗಿದ್ದೇ ಪವಾಡ..!
ಪಶ್ಚಿಮ ಘಟ್ಟ ಸಂರಕ್ಷಣೆಗೆ ಕಸ್ತೂರಿ ರಂಗನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದರು. ಇಸ್ರೋ ಮಾಜಿ ಅಧ್ಯಕ್ಷರ ಅಗಲಿಕೆಗೆ ದೇಶಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು.
ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು. ರಾಜ್ಯಸಭೆ ಸದಸ್ಯರಾಗಿ ದೇಶದ ಮಹತ್ವಪೂರ್ಣ ನೀತಿಗಳನ್ನು ರೂಪಿಸುವಲ್ಲಿಯೂ ನಿರ್ಣಾಯಕ ಪಾತ್ರ ವಹಿಸಿದ್ದರು.
ಕಸ್ತೂರಿ ರಂಗನ್ ಅವರ ಸಾಧನೆಯನ್ನು ಗುರುತಿಸಿದ್ದ ಭಾರತ ಸರ್ಕಾರ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ನೀಡಿ ಗೌರವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ