newsfirstkannada.com

ಮಾಜಿ ಸಂಸದ ಮೂಡಲಗಿರಿಯಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

Share :

Published March 23, 2024 at 2:17pm

Update March 23, 2024 at 2:19pm

  ವಯೋ ಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಮಾಜಿ ಸಂಸದ

  ನಾಳೆ ಬೆಳಗ್ಗೆ 10 ಗಂಟೆಗೆ ಮೂಡಲಗಿರಿಯಪ್ಪ ಅವರ ಅಂತ್ಯಕ್ರಿಯೆ

  ಅಗಲಿದ ನಾಯಕನಿಗೆ ಕಂಬನಿ ಮಿಡಿದ ನಾಡಿನ ಗಣ್ಯರು

ತುಮಕೂರು: ಮಾಜಿ ಸಂಸದ ಮೂಡಲಗಿರಿಯಪ್ಪ (84) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಸಿರಾಟದ ಸಮಸ್ಯೆ ಮಾತ್ರವಲ್ಲ ವಯೋ ಸಹಜ ಕಾಯಿಲೆಗೂ ಒಳಗಾಗಿದ್ದರು.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದವರಾಗಿದ್ದ ಮೂಡಲಗಿರಿಯಪ್ಪ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು. 1989, 1991, 1998ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಶಿರಾ ವಿಧಾನಸಭೆ ಕ್ಷೇತ್ರದ ಶಾಸಕರೂ ಆಗಿದ್ದರು. ಇನ್ನು ಇವರ ಪುತ್ರ ಡಾ.ಸಿಎಂ ರಾಜೇಶ್​​ ಗೌಡ 2020ರಲ್ಲಿ ಶಿರಾ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು. ನಾಳೆ ಬೆಳಗ್ಗೆ 10 ಗಂಟೆಗೆ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾಜಿ ಸಂಸದ ಮೂಡಲಗಿರಿಯಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ

https://newsfirstlive.com/wp-content/uploads/2024/03/mudalagiriyappa.jpg

Load More