newsfirstkannada.com

Breaking News: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

Share :

18-07-2023

    ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಂಡಿ

    ಉಮ್ಮನ್ ಚಾಂಡಿ ನಿಧನಕ್ಕೆ ಗಣ್ಯರ ಕಂಬನಿ

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ, ನಗರದ ಹೆಚ್​​ಸಿಜಿ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಉಮ್ಮನ್ ಚಾಂಡಿಗೆ 79 ವರ್ಷಗಳಾಗಿತ್ತು. ಚಾಂಡಿ ನಿಧನದ ಬಗ್ಗೆ ಅವರ ಪುತ್ರ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಪ್ಪ ನಿಧನರಾಗಿದ್ದಾರೆ ಎಂದು ಫೇಸ್​ಬುಕ್​​ನಲ್ಲಿ ಶೇರ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಅವರು ನೀಡಿಲ್ಲ.

ಎರಡು ಬಾರಿ ಮುಖ್ಯಮಂತ್ರಿಯಾಗಿ ಕೇರಳದ ಜನರ ಒಳಿತಿಗಾಗಿ ಶ್ರಮಿಸಿದ್ದರು. 2004 ರಿಂದ 2006 ಹಾಗೂ 2011ರಿಂದ 2016 ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು. ಮಾತ್ರವಲ್ಲ, 2006 ರಿಂದ 2011ರವರೆಗೆ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿಯೂ ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

https://newsfirstlive.com/wp-content/uploads/2023/07/Omnchandy.jpg

Load More