newsfirstkannada.com

×

ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಕಿರುಕುಳ -ಜೈಲಿಂದ ಹೊರ ಬರುತ್ತಿದ್ದಂತೆ B ನಾಗೇಂದ್ರ ಹೇಳಿದ್ದೇನು? ​

Share :

Published October 16, 2024 at 11:57am

    ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ

    ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು

    ನನ್ನ ಪಾತ್ರವೇ ಇಲ್ಲ ಸಿದ್ದರಾಮಯ್ಯನವರ ಪಾತ್ರ ಹೇಗೆ ಬರುತ್ತದೆ?

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಬಳ್ಳಾರಿ ಗ್ರಾಮಾಂತರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರು ಬಿಡುಗಡೆ ಆಗಿದ್ದಾರೆ. ಜಾಮೀನಿನ ಷರತ್ತು ಪೂರೈಸಿದ ಹಿನ್ನೆಲೆ ಜೈಲಿನಿಂದ ಶಾಸಕ ಬಿಡುಗಡೆ ಆಗಿದ್ದಾರೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ಬಿ ನಾಗೇಂದ್ರ ಅವರನ್ನು ಬಂಧಿಸಿ ತನಿಖೆ ನಂತರ ಜೈಲಿಗೆ ಕಳುಹಿಸಿದ್ದರು. ಜೈಲಿನಲ್ಲಿ ಇದ್ದ ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಜಾಮೀನಿನ ಷರತ್ತುಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶಾಸಕ ನಾಗೇಂದ್ರ ಅವರು ಹೊರ ಬಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿದ್ಯುತ್ ಇಲಾಖೆಯಿಂದ ಕಾಲ್​ಫಾರ್ಮ್​.. 500, ಸಾವಿರ ಅಲ್ಲ 2 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಜೈಲಿನಿಂದ ಹೊರಬಂದ ಮಾಜಿ ಸಚಿವ ಬಿ.ನಾಗೇಂದ್ರ ಮಾತನಾಡಿ, ಇಡಿ ಅಧಿಕಾರಿಗಳು ಸಂಚು ರೂಪಿಸಿ ನನ್ನ ಬಂಧನ ಮಾಡಿದ್ದರು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಕಿರುಕುಳ ನೀಡಲಾಗಿತ್ತು. ಅವರ ಬಂಧನ ಮಾಡುವ ಸಲುವಾಗಿ ಈ ರೀತಿ ಮಾಡಲಾಗಿದೆ. ನನ್ನ ಪಾತ್ರವೇ ಇಲ್ಲ ಸಿದ್ದರಾಮಯ್ಯನವರ ಪಾತ್ರ ಹೇಗೆ ಬರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯಕ್ಕೆ ನಾನು ಧನ್ಯವಾದ ಹೇಳುತ್ತೇನೆ. ನನಗೆ ಜಾಮೀನು ಮಂಜೂರು ಮಾಡಿದೆ. ಮತ್ತೆ ಸಚಿವ ಸ್ಥಾನ ಕೊಡುವುದು, ಬಿಡುವುದು ಕಾಂಗ್ರೆಸ್​ ಹೈಕಮಾಂಡ್​ಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಎಂ ಸಿದ್ದರಾಮಯ್ಯ ಹೆಸರು ಹೇಳುವಂತೆ ಕಿರುಕುಳ -ಜೈಲಿಂದ ಹೊರ ಬರುತ್ತಿದ್ದಂತೆ B ನಾಗೇಂದ್ರ ಹೇಳಿದ್ದೇನು? ​

https://newsfirstlive.com/wp-content/uploads/2024/10/NAGENDRA_CM_SIDDU-1.jpg

Load More