/newsfirstlive-kannada/media/post_attachments/wp-content/uploads/2025/02/KRISHNAIAH_SHETTY_1.jpg)
ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಸೇರಿ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ. ಸದ್ಯ ಸಿಬಿಐ ಅಧಿಕಾರಿಗಳು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಇವರೆಲ್ಲಾ ಸೇರಿ ಸರ್ಕಾರಿ ನೌಕರರ ಹೆಸರಲ್ಲಿ ನಕಲಿ ದಾಖಲೆಗಳನ್ನು ಅಕ್ರಮವಾಗಿ ಸೃಷ್ಟಿ ಮಾಡಿದ್ದರು. ಬಳಿಕ ಈ ದಾಖಲೆಗಳಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದುಕೊಂಡಿದ್ದರು.
ಇದನ್ನೂ ಓದಿ: DCM ಡಿ.ಕೆ ಶಿವಕುಮಾರ್ ನಿವಾಸಕ್ಕೆ ಕಿಚ್ಚ ಸುದೀಪ್ ದಿಢೀರ್ ಭೇಟಿ.. ಕಾರಣವೇನು?
ಕೋಟ್ಯಂತರ ರೂಪಾಯಿ ಸಾಲ ಪಡೆದಿರುವುದು ಬಹಿರಂಗವಾದ ಮೇಲೆ ಠಾಣೆಯಲ್ಲಿ ಐಪಿಸಿ 120ಬಿ, 409, 420, 467, 468, 471 ಅಡಿ ಕೇಸ್ ದಾಖಲು ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್, ಕೃಷ್ಣಯ್ಯಶೆಟ್ಟಿ ಸೇರಿ ನಾಲ್ವರು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.
ತಪ್ಪು ಮಾಡಿರುವುದು ನ್ಯಾಯಾಲಯದಲ್ಲೇ ಸಾಬೀತು ಆಗಿದೆ. ಈಗ ಶಿಕ್ಷೆ ಪ್ರಮಾಣ ಮಾತ್ರ ನ್ಯಾಯಾಲಯ ವಿಚಾರಣೆ ನಡೆಸಬೇಕಿದೆ. ಈ ವಿಚಾರಣೆಯಲ್ಲಿ ಶಿಕ್ಷೆ ಏನೇನು ಇರಲಿದೆ ಎಂಬುದನ್ನು ನ್ಯಾಯಾಲಯ ಪ್ರಕಟ ಮಾಡಲಿದೆ. ಸದ್ಯ ಸಿಬಿಐ ಅಧಿಕಾರಿಗಳು ಕೋರ್ಟ್ನಲ್ಲಿಯೇ ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ