ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ.. ಹುಟ್ಟೂರಲ್ಲಿ ಅಂತ್ಯಕ್ರಿಯೆ

author-image
Bheemappa
Updated On
ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ.. ಹುಟ್ಟೂರಲ್ಲಿ ಅಂತ್ಯಕ್ರಿಯೆ
Advertisment
  • 4 ಬಾರಿ ಶಾಸಕರಾಗಿ ಆಯ್ಕೆ, ಮೂರು ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರು
  • ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದ ಮಾಜಿ ಸಚಿವ
  • ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಆಸ್ಪತ್ರೆಯಲ್ಲಿ ನಿಧನ

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್​ನ ಎನ್​​ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇತ್ತೀಚಿಗಷ್ಟೇ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

publive-image

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು ಬಿಇ ಮೆಕ್ಯಾನಿಕಲ್ ಪದವೀಧರರು. ಈ ಹಿಂದೆ ಎಸ್‌.ಎಂ ಕೃಷ್ಣ ಅವರು ಸಿಎಂ ಆಗಿದ್ದ ಅವಧಿಯಲ್ಲಿ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment